ಯಡಿಯೂರಪ್ಪ ಇಲ್ಲದ ಮನೆ ಮುಂದೆ ಗೌಡ್ರರ ಧರಣಿಗೆ ಸಿದ್ಧತೆ

ಹಾಸನ ಜಿಲ್ಲೆ ಮತ್ತು ಪ್ರತಿಪಕ್ಷ ಸದಸ್ಯರ ಕ್ಷೇತ್ರಗಳಲ್ಲಿನ ಅಭಿವೃದ್ಧಿ ಕಾರ್ಯಗಳಿಗೆ ಹಣ ನೀಡದೆ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ತಾರತಮ್ಯ ನೀತಿ ಅನುಸರಿಸುತ್ತಿದೆ. ಸರ್ಕಾರದ ಈ ಧೋರಣೆಯನ್ನು ಖಂಡಿಸಿ ಇದೇ 27ರಂದು ಯಡಿಯೂರಪ್ಪ ಅವರ ಮನೆ ಮುಂದೆ ಧರಣಿ ನಡೆಸುತ್ತೇನೆ. ಜೆಡಿಎಸ್ ನ ಎಲ್ಲಾ ಎಂಎಲ್ ಎ, ಎಂಪಿಗಳು ಪಾಲ್ಗೊಳ್ಳಲಿದ್ದಾರೆ ಎಂದು ದೇವೇಗೌಡರು ಹೇಳಿದ್ದಾರೆ.
ಜುಲೈನಲ್ಲಿ ಯಡಿಯೂರಪ್ಪ ಅವರು ಹಾಸನ- ಚಿಕ್ಕನಾಯಕನಹಳ್ಳಿ ನಡುವಿನ 236 ಕೋಟಿ ರೂ.ರಸ್ತೆ ಕಾಮಗಾರಿಗೆ ಚಾಲನೆ ನೀಡಲಿದ್ದಾರೆ. ಡುವ ಜೊತೆಗೆ ಹಲವು ಯೋಜನೆಗಳಿಗೆ ಚಾಲನೆಯನ್ನೂ ನೀಡಲಿದ್ದಾರೆ. ಹಾಸನ ಜಿಲ್ಲೆಯ ಎಲ್ಲಾ ಶಾಸಕರು ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ಆಹ್ವಾನಿಸಿ, ಎಲ್ಲಾ ಸಮಸ್ಯೆಗಳಿಗೆ ಚರ್ಚೆ ಮಾಡಿ ಪರಿಹಾರ ಕ್ರಮ ಕೈಗೊಳ್ಳಲಾಗುವುದು. ಯಡಿಯೂರಪ್ಪ ಅವರು ಯಾವುದೆ ಅನ್ಯಾಯ ಮಾಡಿಲ್ಲ. ಗೌಡರು ಸತ್ಯಾಗ್ರಹ ನಡೆಸುವುದು ಒಳ್ಳೆಯದಲ್ಲ ಎಂದು ಸಚಿವ ಸೋಮಣ್ಣ ಹೇಳಿದ್ದಾರೆ.
ಧರಣಿ ನಡೆಯುವ ಸಂದರ್ಭದಲ್ಲಿ ಅಹಿತಕರ ಘಟನೆಗಳು ಸಂಭವಿಸಿದರೆ ಅದಕ್ಕೆ ನಾವು ಜವಾಬ್ದಾರರಲ್ಲ. ಸರ್ಕಾರವೇ ಅದರ ಹೊಣೆ ಹೊರಬೇಕಾಗುತ್ತದೆ ಎಂದು ಜೆಡಿಎಸ್ ಮುಖಂಡ ಎಚ್ ಡಿ ರೇವಣ್ಣ ಹೇಳಿದ್ದಾರೆ.












Click it and Unblock the Notifications