ಮೋದಿ ನಾಡಿನಲ್ಲಿ RTI ಕಾರ್ಯಕರ್ತನ ಮೇಲೆ ತೀವ್ರ ಹಲ್ಲೆ

ದೇವಾನಿ ಅವರು ಮಾಹಿತಿ ಹಕ್ಕು ಕಾರ್ಯಕರ್ತರಾಗಿದ್ದು, ಪೋರಬಂದರಿನಲ್ಲಿ ನಡೆಯುತ್ತಿದ್ದ ಅಕ್ರಮ ಗಣಿಗಾರಿಕೆ ವಿರುದ್ದದ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದರು. ಅಲ್ಲದೆ ಇಲ್ಲಿ ಮುಖ್ಯಮಂತ್ರಿ ನರೇಂದ್ರ ಮೋದಿ ಅವರು ನಿರ್ಮಿಸುತ್ತಿದ್ದ ಬಹುಮಹಡಿ ಕಟ್ಟಡಗಳು ಹಾಗೂ ಹೋಟೆಲ್‌ಗಳ ವಿರುದ್ದ ಗುಜರಾತ್ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು.
ರಾಜೀವ್‌ನಗರದಲ್ಲಿ ಅವರ ನಿವಾಸದ ಬಳಿ ದೇವಾನಿ ಕಾರಿನಲ್ಲಿ ಹೋಗುತ್ತಿದ್ದಾಗ ಶುಕ್ರವಾರ ರಾತ್ರಿ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ತೀವ್ರವಾಗಿ ಹಲ್ಲೆ ನಡೆಸಿದರು. ಮಾರಣಾಂತಿಕವಾಗಿ ಗಾಯಗೊಂಡ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾರೆ. ಈ ಸಂಬಂಧ ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ನಾಲ್ವರನ್ನು ಬಂಧಿಸಿದ್ದು, ತನಿಖೆಯನ್ನು ಚುರುಕುಗೊಳಿಸಿದ್ದಾರೆ.
ಕಳೆದ ವರ್ಷ ಜುಲೈನಲ್ಲಿ ಅಕ್ರಮ ಗಣಿಗಾರಿಕೆ ವಿರುದ್ದ ಹೋರಾಟ ನಡೆಸುತ್ತಿದ್ದ ಅಮಿತ್‌ಜೇತ್ವ ಎಂಬವರನ್ನು ಹೈಕೋರ್ಟ್ ಬಳಿ ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು.












Click it and Unblock the Notifications