ಯಾದಗಿರಿಯಲ್ಲಿ ಆಧಾರ್ ಯೋಜನೆಗೆ ಚಾಲನೆ

Mumtaz Ali Khan launches Aadhaar card distribution program in Yadagiri
ಯಾದಗಿರಿ, ಜೂ. 28 : ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿರುವ ಜಿಲ್ಲೆಯ ಜನರಿಗೆ ವಿಶಿಷ್ಟ ಗುರುತಿನ ಕಾರ್ಡ್ ನೀಡುವ ಆಧಾರ ಯೋಜನೆಗೆ ಜಿಲ್ಲಾ ಉಸ್ತುವಾರಿ ಸಚಿವ ಪ್ರೊ. ಮುಮ್ತಾಜ್ ಅಲಿಖಾನ್ ಸೋಮವಾರ ಚಾಲನೆ ನೀಡಿದರು.

ನಗರದ ಅಂಬೇಡ್ಕರ್ ಭವನದ ಸಭಾಂಗಣದಲ್ಲಿ ಇದಕ್ಕಾಗಿ ವ್ಯವಸ್ಥೆ ಮಾಡಲಾಗಿತ್ತು. ಮುಮ್ತಾಜ್ ಅಲಿಖಾನ್ ಅವರ ಭಾವಚಿತ್ರ ಸೆರೆ ಹಿಡಿಯುವ ಮೂಲಕ ಕಾರ್ಯಕ್ರಮಕ್ಕೆ ವಿಧ್ಯುಕ್ತವಾಗಿ ಚಾಲನೆ ನೀಡಲಾಯಿತು.

ಯುನೀಕ್ ಐಡೆಂಟಿಫಿಕೇಷನ್ ಅಥಾರಿಟಿ ಆಫ್ ಇಂಡಿಯಾ (ಯು.ಐ.ಡಿ.ಎ.ಐ) ಆಧಾರ್ ಯೋಜನೆಯಲ್ಲಿ ಪ್ರತಿಯೊಬ್ಬ ನಿವಾಸಿಗೆ 12 ಅಂಕಿಗಳಿರುವ ಒಂದು ವಿಶಿಷ್ಟ ಗುರುತಿನ ಸಂಖ್ಯೆಯ ಕಾರ್ಡ್ ನೀಡಲಾಗುತ್ತದೆ. ಇದನ್ನು ಪಡೆಯಲು ಶುಲ್ಕ ನೀಡಬೇಕಿಲ್ಲ. ಇದು ಸಂಪೂರ್ಣ ಉಚಿತವಾಗಿದೆ.

ಸರ್ಕಾರದ ವಿವಿಧ ಸೌಲಭ್ಯ ಪಡೆಯಲು, ಮಕ್ಕಳನ್ನು ಶಾಲೆಗೆ ಸೇರಿಸಲು, ವೃದ್ಧಾಪ್ಯ ವೇತನ, ಉದ್ಯೋಗ, ಬ್ಯಾಂಕ್ ಖಾತೆ ತೆರೆಯಲು, ಆರೋಗ್ಯ ಸೇವೆಯಂತಹ ವ್ಯಕ್ತಿಗತ ಯೋಜನೆಗಳ ಲಾಭ ಪಡೆಯಲು ಆಧಾರ್ ಸಂಖ್ಯೆ ಆಧಾರವಾಗಲಿದೆ ಎಂದು ಸಚಿವರು ಹೇಳಿದರು

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಗುರುನೀತ್ ತೇಜ್ ಮೆನನ್, ಸಹಾಯಕ ಆಯುಕ್ತರಾದ ಕವಿತಾ ಮನ್ನಿಕೇರಿ, ಶಹಾಪೂರ ಶಾಸಕ ಶರಣಬಸಪ್ಪ ದರ್ಶನಾಪೂರ, ತೋಗರಿ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಡಾ. ವೆಂಕಟೇಶ ಗಡ್ಡಿಮನಿ, ನಗರಸಭೆ ಅಧ್ಯಕ್ಷೆ ನಾಗರತ್ನ ಅನಪೂರ, ಜಿಪಂ ಅಧ್ಯಕ್ಷೆ ಅನಸೂಯಾ ಬೋರಬಂಡಾ, ಇನ್ನಿತರು ಈ ಕಾರ್ಯಕ್ರಮದಲ್ಲಿ ಇದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+