KFD ನಿಷೇಧಕ್ಕೆ ಆಗ್ರಹಿಸಿ ಕೇಂದ್ರಕ್ಕೆ ಪತ್ರ: ಅಶೋಕ

ಈಗಾಗಲೇ KFD ಸಂಘಟನೆಯ ಮೇಲೆ ನಿಷೇಧ ಹೇರುವಂತೆ ಕೇರಳದ ಹಿಂದಿನ ಮುಖ್ಯಮಂತ್ರಿಗಳು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಈ ಸಂಘಟನೆ ದೇಶ ವಿರೋಧಿ ಚಟುವಟಿಕೆಗಳಲ್ಲಿ ಭಾಗಿಯಾಗಿದೆ ಎಂಬುದರ ಬಗ್ಗೆ ಪ್ರಥಮ ಮಾಹಿತಿ ದೊರೆತಿದೆ. ಹೀಗಾಗಿ ಇನ್ನಷ್ಟು ಮಾಹಿತಿ ಕಲೆ ಹಾಕಿದ ನಂತರ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದು ನಿಷೇಧಿಸುವಂತೆ ಒತ್ತಾಯಿಸಲಾಗುವುದು ಎಂದು ವಿವರಿಸಿದರು.
ಹುಣಸೂರಿನ ಇಬ್ಬರು ಕಾಲೇಜು ವಿದ್ಯಾರ್ಥಿಗಳ ಅಪಹರಣ ಮತ್ತು ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿರುವ KFD ಸಂಘಟನೆಯ ಕಾರ್ಯವೈಖರಿ ಬಗ್ಗೆ ಹೆಚ್ಚಿನ ಮಾಹಿತಿ ಸಂಗ್ರಹಿಸಲಾಗುತ್ತಿದೆ ಎಂದು ಅಶೋಕ ಹೇಳಿದರು.
ಹುಣಸೂರಿನ ಇಬ್ಬರು ಕಾಲೇಜು ವಿದ್ಯಾರ್ಥಿಗಳ ಅಪಹರಣ ಮತ್ತು ಹತ್ಯೆ ಪ್ರಕರಣವನ್ನು ಭೇದಿಸುವ ಮೂಲಕ KFD ಸಂಘಟನೆಯ ವ್ಯಾಘ್ರ ಮುಖವನ್ನು ಪೊಲೀಸರು ಕಳಚಿ ಹಾಕಿದ್ದಾರೆ. ಪ್ರಕರಣದ ತ್ವರಿತ ವಿಚಾರಣೆಗಾಗಿ ವಿಶೇಷ ನ್ಯಾಯಾಲಯ ಸ್ಥಾಪಿಸುವ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ ಎಂದು ಅವರು ತಿಳಿಸಿದರು.












Click it and Unblock the Notifications