ವೈದ್ಯರ ನಿರ್ಲಕ್ಷ್ಯ ಪ್ರಕರಣ: ಇನ್ಫೋಸಿಸ್ ಟೆಕ್ಕಿ ಸಾವು

ಕೋಮಾ ಸ್ಥಿತಿಯಲ್ಲಿದ್ದ ಪ್ರಶಾಂತ್ ಅವರನ್ನು ಜೂನ್ 21ರಂದು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಿದುಳು ರಕ್ತ ಸ್ರಾವಕ್ಕೊಳಗಾಗಿದ್ದ ಅವರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ತೀವ್ರ ತಲೆನೋವು ಮತ್ತು ಅಧಿಕ ರಕ್ತದೊತ್ತಡದಿಂದಾಗಿ ಮಿದುಳಿನಲ್ಲಿ ರಕ್ತಸ್ರಾವವಾಗಿ ಅವರು ಸಾವನ್ನಪ್ಪಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
ಎದೆಯಲ್ಲಿ ಬೆಳೆದಿದ್ದ ದುರ್ಮಾಂಸದ ಶಸ್ತ್ರಚಿಕಿತ್ಸೆಗಾಗಿ ಪ್ರಶಾಂತ್ ಅವರು 1991ರಲ್ಲಿ ಹೈದರಾಬಾದ್‌ನ ನಿಜಾಮ್ ವೈದ್ಯಕೀಯ ವಿಜ್ಞಾನ ಸಂಸ್ಥೆ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಸಂದರ್ಭದಲ್ಲಿ ವೈದ್ಯರ ನಿರ್ಲಕ್ಷ್ಯದಿಂದಾಗಿ ಅವರ ಕಾಲುಗಳು ಸ್ವಾಧೀನ ಕಳೆದುಕೊಂಡಿದ್ದವು.
ರಾಷ್ಟ್ರೀಯ ಗ್ರಾಹಕ ಆಯೋಗವು 7. 50 ಲಕ್ಷ ರುಪಾಯಿ ಪರಿಹಾರ ನೀಡಬೇಕೆಂದು ಆಸ್ಪತ್ರಗೆ ಆದೇಶಿಸಿತ್ತು. ಆದರೆ ಪ್ರಶಾಂತ್ ಇದನ್ನು ಸುಪ್ರೀಂಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು. ವೈದ್ಯಕೀಯ ವೆಚ್ಚ ಮತ್ತು ಇತರ ವೆಚ್ಚಕ್ಕಾಗಿ ಭರಿಸಿದ 7.50 ಕೋಟಿ ಹಣವನ್ನು ಪರಿಹಾರವಾಗಿ ಕೊಡಿಸಬೇಕೆಂದು ಮನವಿ ಸಲ್ಲಿಸಿದ್ದರು.
2009ರ ಮೇ 15ರಲ್ಲಿ ತೀರ್ಪು ಪ್ರಕಟಿಸಿದ್ದ ನ್ಯಾಯಾಲಯ, ಒಂದು ಕೋಟಿ ರುಪಾಯಿ ಪರಿಹಾರ ನೀಡಬೇಕೆಂದು ಆದೇಶಿಸಿತ್ತು. ಈ ಪ್ರಕರಣದಲ್ಲಿ ಸ್ವತಃ ಪ್ರಶಾಂತ್ ಅವರೇ ವಾದ ಮಂಡಿಸಿದ್ದು ವಿಶೇಷ ಎನಿಸಿತ್ತು












Click it and Unblock the Notifications