ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಹಾರಂಗಿ ಜಲಾಶಯದಿಂದ ಭರ್ತಿ, ಕಟ್ಟೆಯೊಡೆದ ಸಂಭ್ರಮ

By * ಬಿ.ಎಂ.ಲವಕುಮಾರ್, ಮೈಸೂರು
|
Google Oneindia Kannada News

Harangi dam Kushalnagar
ಕುಶಾಲನಗರ, ಜು. 3 : ಕೊಡಗಿನಲ್ಲಿ ಮುಂಗಾರು ಚೇತರಿಸಿದ್ದು, ಉತ್ತಮವಾಗಿ ಮಳೆ ಸುರಿಯುತ್ತಿರುವುದರಿಂದ ಹಾರಂಗಿ ಜಲಾಶಯ ಬಹುತೇಕ ಭರ್ತಿಯಾಗಿದ್ದು, ಶನಿವಾರದಿಂದ ಜಲಾಶಯದ ನಾಲ್ಕು ಕ್ರೆಸ್ಟ್ ಗೇಟ್‌ಗಳಿಂದ ಹೆಚ್ಚುವರಿ ನೀರನ್ನು ನದಿಗೆ ಬಿಡಲಾಗುತ್ತಿದೆ.

ಕಾವೇರಿ ಕಣಿವೆಯ ಪ್ರಮುಖ ಜಲಾಶಯಗಳಲ್ಲಿ ಒಂದಾಗಿರುವ ಹಾರಂಗಿ ಜಲಾಶಯ ಪ್ರಸಕ್ತ ಸಾಲಿನಲ್ಲಿ ಪ್ರಥಮ ಬಾರಿಗೆ ಭರ್ತಿಯಾದ ಜಲಾಶಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಈ ಜಲಾಶಯ ಗರಿಷ್ಠ ಮಟ್ಟ 2859 ಅಡಿಯಿದ್ದು, ಜಲಾಶಯದ ಈಗಿನ ನೀರಿನ ಮಟ್ಟ 2856 ಅಡಿಯಿದ್ದು, ಜಲಾಶಯಕ್ಕೆ ಹರಿದು ಬರುತ್ತಿರುವ ನೀರಿನ ಪ್ರಮಾಣ 1900 ಕ್ಯೂಸೆಕ್ಸ್‌ನಷ್ಟಿದೆ.

ಜಲಾಶಯ ಮತ್ತು ಕಾವೇರಿ ಮಾತೆಗೆ ಪೂಜೆ ಸಲ್ಲಿಸಿದ ಬಳಿಕ ನಾಲ್ಕು ಗೇಟ್‌ಗಳಿಂದ ನೀರನ್ನು ಹರಿಯಬಿಡಲಾಯಿತು. ಜಲಾಶಯದಿಂದ ನೀರು ಹರಿಸುವ ಮುನ್ನ ತಗ್ಗುಪ್ರದೇಶದ ಜನರಿಗೆ ಮೀನುಗಾರರಿಗೆ, ನದಿಯ ಅಸುಪಾಸಿನಲ್ಲಿ ವಾಸಿಸುವ ಜನರಿಗೆ ಸುರಕ್ಷಿತ ಸ್ಥಳಗಳಿಗೆ ತೆರಳಲು ಸೂಚಿಸಲು ಮೂರು ಭಾರಿ ಸೈರನ್ ಮೊಳಗಿಸಲಾಯಿತು.

ಜಲಾಶಯದಿಂದ ನೀರು ಬಿಟ್ಟ ವಿಷಯ ತಿಳಿಯುತ್ತಿದ್ದಂತೆಯೇ ಸುತ್ತಮುತ್ತಲಿನ ಜನರು ಸ್ಥಳಕ್ಕೆ ಧಾವಿಸಿ ಸಂಭ್ರಮಿಸಿದರು. ಜಲಾಶಯದಿಂದ ನಾಲ್ಕು ಕ್ರೆಸ್ಟ್ ಗೇಟ್‌ಗಳ ಮೂಲಕ ನದಿಗೆ 1000 ಕ್ಯೂಸೆಕ್ಸ್ ಗಳಷ್ಟು ನೀರನ್ನು ಹರಿಬಿಡಲಾಗಿದೆ. ಸುಮಾರು 8.5 ಟಿಎಂಸಿ ಸಾಮರ್ಥ್ಯದ ಹಾರಂಗಿ ಜಲಾಶಯದಲ್ಲಿ ಇದೀಗ 8 ಟಿ.ಎಂ.ಸಿ.ಗಳಷ್ಟು ನೀರಿದೆ. ಶನಿವಾರ ಹಾರಂಗಿ ಜಲಾನಯನ ಪ್ರದೇಶದ ವ್ಯಾಪ್ತಿಯಲ್ಲಿ 11.2 ಮಿ.ಮೀ.ನಷ್ಟು ಮಳೆ ದಾಖಲಾಗಿದ್ದು, ಪ್ರಸಕ್ತ ಸಾಲಿನಲ್ಲಿ ಈ ತನಕ 355 ಮಿ.ಮೀ. ಮಳೆ ಬಿದ್ದಿದೆ.

ಕಣ್ಮನ ಸೆಳೆಯುವ ಜಲಾಶಯ : ಜಲಾಶಯದ ಕ್ರೆಸ್ಟ್ ಗೇಟ್‌ಗಳ ಹೊರಹೋಗುತ್ತಿರುವ ನೀರು ಹಾಲಿನ ನೊರೆಯಂತೆ ಧುಮ್ಮಿಕ್ಕುತ್ತಿದ್ದು, ಈ ನಯನ ಮನೋಹರ ದೃಶ್ಯ ನೋಡಲು ಪ್ರವಾಸಿಗರು ಹಾರಂಗಿಗೆ ಲಗ್ಗೆಯಿಡುತ್ತಿದ್ದಾರೆ.

ಹಾರಂಗಿ ಜಲಾಶಯದಿಂದ ಕೊಡಗು ಜಿಲ್ಲೆ ಸೇರಿದಂತೆ ನೆರೆಯ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ, ಹುಣಸೂರು ಮತ್ತು ಕೆ.ಆರ್.ನಗರ ಹಾಗೂ ಹಾಸನ ಜಿಲ್ಲೆಯ ಅರಕಲಗೂಡು ತಾಲ್ಲೂಕು ಸೇರಿದಂತೆ 1,34,895 ಎಕರೆ ಪ್ರದೇಶಕ್ಕೆ ನೀರು ಪೂರೈಸಲಾಗುತ್ತಿದೆ. ಹಾರಂಗಿ ಜಲಾಶಯದಿಂದ ಹರಿಯುವ ನೀರು, ಕೂಡಿಗೆ ಬಳಿ ಹಾರಂಗಿ ನದಿ ಮೂಲಕ ಕಾವೇರಿ ನದಿ ಸೇರಿ, ನಂತರ ಕೃಷ್ಣರಾಜ ಸಾಗರವನ್ನು ಸೇರಲಿದೆ. ಹಾರಂಗಿ ಜಲಾಶಯದಿಂದ ಹೆಚ್ಚುವರಿ ನೀರು ಹರಿದು ಬರುತ್ತಿರುವುದರಿಂದ ಕೆಆರ್‌ಎಸ್ ಬಹು ಬೇಗ ಭರ್ತಿಯಾಗುವ ಸಾಧ್ಯತೆ ಕಂಡು ಬರತೊಡಗಿದೆ.

English summary
Harangi dam in Kushalnagar in Coorg district is almost full and all the crest gates were opened on saturday. Tourists are rushing to see the beauty in Harangi.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X