ಚಿತ್ರದುರ್ಗದಲ್ಲಿ ಸೋಪ್ ಸಂತೆ, ಕೊಳ್ಳಲೇನು ಚಿಂತೆ?

ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ (KSDL), 2011-12ನೇ ಸಾಲಿನಲ್ಲಿ ರೂ. 260 ಕೋಟಿಯಷ್ಟು ಮಾರಾಟದ ಗುರಿಯನ್ನು ಹೊಂದಿದ್ದು, ಈ ನಿಟ್ಟಿನಲ್ಲಿ ಗ್ರಾಹಕರ ಮನೆ ಬಾಗಿಲಿಗೆ ಉತ್ಪನ್ನಗಳನ್ನು ತಲುಪಿಸುವ ಆಶಯದಿಂದ ಚಿತ್ರದುರ್ಗ ಜಿಲ್ಲೆ ಮತ್ತು ತಾಲ್ಲೂಕು ಕೇಂದ್ರಗಳಲ್ಲಿ ಕೆಎಸ್‌ಡಿಎಲ್ ಸೋಪ್ ಸಂತೆ ಎಂಬ ವಿನೂತನ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.
ಕಾರ್ಯಕ್ರಮದ ಅಂಗವಾಗಿ ಜುಲೈ 14 ರಂದು ಬೆಳಿಗ್ಗೆ 10.30ಕ್ಕೆ ವಾಸವಿ ಮಹಲ್, ವಾಸವಿ ಮಹಲ್ ರಸ್ತೆ, ಚಿತ್ರದುರ್ಗ ಇಲ್ಲಿ ಸಾಬೂನು ಮೇಳವನ್ನು ಆಯೋಜಿಸಲಾಗಿದೆ. ಈ ಸೋಪ್-ಸಂತೆಯನ್ನು ಡಾ: ಶ್ರೀ ಶಿವಮೂರ್ತಿ ಮುರುಘ ಶರಣರು, ಶ್ರೀ ಮುರುಘ ರಾಜೇಂದ್ರ ಮಠ, ಚಿತ್ರದುರ್ಗ ಇವರು ಉದ್ಘಾಟಿಸಲಿದ್ದಾರೆ.
ಚಿತ್ರದುರ್ಗ ಶಾಸಕ ಎಸ್. ಕೆ. ಬಸವರಾಜನ್, ವಿಧಾನ ಪರಿಷತ್ ಸದಸ್ಯ ಜಿ. ಎಚ್. ತಿಪ್ಪಾರೆಡ್ಡಿ, ಭಾ.ಆ.ಸೇ, ಜಿಲ್ಲಾಧಿಕಾರಿ ವಿಪುಲ್ ಬನ್ಸಲ್ ಹಾಗೂ ನಗರಸಭೆ ಅಧ್ಯಕ್ಷೆ ಸುನಿತ ಮಲ್ಲಿಕಾರ್ಜುನ ಮುಖ್ಯ ಅತಿಥಿಗಳಾಗಿ ಆಗಮಿಸುತ್ತಿದ್ದಾರೆ. ಕೆ.ಎಸ್.ಡಿ.ಎಲ್ ಅಧ್ಯಕ್ಷ ಶಿವಾನಂದ ನಾಯ್ಕ, ಮತ್ತು ಐ.ಎ.ಎಸ್. ವ್ಯವಸ್ಥಾಪಕ ನಿರ್ದೇಶಕ ಎಂ.ಕೆ. ಬಲದೇವಕೃಷ್ಣ ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ.












Click it and Unblock the Notifications