ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 36 ಡೆಂಗ್ಯೂ ಪ್ರಕರಣ
ಮಂಗಳೂರು,
ಜು. 16 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜನವರಿಯಿಂದ ಇಲ್ಲಿಯವರೆಗೆ 36 ಡೆಂಗ್ಯೂ ಜ್ವರದ ಪ್ರಕರಣಗಳು ಪತ್ತೆಯಾಗಿವೆ ಮತ್ತು ಇಬ್ಬರು ಮೃತಪಟ್ಟಿದ್ದಾರೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಒ.ಶ್ರೀರಂಗಪ್ಪ ತಿಳಿಸಿದ್ದಾರೆ. id="toptextpromo">ಮೂಲ್ಕಿಯಲ್ಲಿರುವ
ಬಿಜಾಪುರ ಕಾಲನಿಯಲ್ಲಿ (ಲಿಂಗಪ್ಪಯ್ಯ ಕಾಡು) ಎರಡು ತಿಂಗಳ ಹಿಂದೆ ಮೂರು ವರ್ಷದ ಬಾಲಕಿ ಮೃತಪಟ್ಟಿದ್ದಳು, ಗುರುವಾರ ಮಂಗಳೂರಲ್ಲಿ ಕಾಲೇಜು ಬಾಲಕಿ ಸ್ವಪ್ನಾ (19) ಮೃತಪಟ್ಟಿದ್ದಾಳೆ. id='are-slot-1' class='oiad oi-axt oiadv'> id='top-searched-articles'>ಜ್ವರ
ಬಂದ ತಕ್ಷಣ ಸೂಕ್ತ ಚಿಕಿತ್ಸೆ ಮೂಲಕ ಈ ರೋಗ ತಡೆಗಟ್ಟಲು ಸಾಧ್ಯವಿದೆ ಎಂದು ಶ್ರೀರಂಗಪ್ಪ ಹೇಳಿದ್ದಾರೆ. ಡೆಂಗ್ಯೂ ಹರಡುವುದನ್ನು ಮುನ್ನೆಚ್ಚರಿಕೆ ಕ್ರಮದಿಂದ ಮಾತ್ರ ತಡೆಗಟ್ಟಲು ಸಾಧ್ಯ. ಈ ಕಾಯಿಲೆಗೆ ನಿರ್ದಿಷ್ಟವಾದ ಔಷಧಿ ಇಲ್ಲವಾದ್ದರಿಂದ ಜ್ವರದ ಲಕ್ಷಣಗಳನ್ನು ಪರಿಶೀಲಿಸಿ ಸಕಾಲದಲ್ಲಿ ಚಿಕಿತ್ಸೆ ನೀಡಬೇಕಾಗಿರುತ್ತದೆ, ಈ ನಿಟ್ಟಿನಲ್ಲಿ ಸಾರ್ವಜನಿಕರು ಸಹಕರಿಸುವಂತೆ ಅವರು ಮನವಿ ಮಾಡಿದ್ದಾರೆ. [ಡೆಂಗ್ಯೂ ಮತ್ತು ಚಿಕುನ್ ಗುನ್ಯಾ ಬಗ್ಗೆ ಎಚ್ಚರಿಕೆ ಕ್ರಮ]











Click it and Unblock the Notifications