ಮುಂಬೈ ಸ್ಫೋಟದಲ್ಲಿ ಆರ್‌ಎಸ್‌ಎಸ್ ಕೈವಾಡ: ದಿಗ್ವಿಜಯ್ ಸಿಂಗ್
ನವದೆಹಲಿ,
ಜು.16: ಮುಂಬೈ ಸರಣಿ ಬಾಂಬ್ ಸ್ಫೋಟದಲ್ಲಿ (ಜು.13) ಹಿಂದು ಸಂಘಟನೆಗಳ ಕೈವಾಡ ಇರುವ ಸಾಧ್ಯತೆ ಇದೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ದಿಗ್ವಿಜಯ್ ಸಿಂಗ್ ಶನಿವಾರ (ಜು.16) ಆರೋಪಿಸಿದ್ದಾರೆ. ಮುಂಬೈ ಸರಣಿ ಸ್ಫೋಟದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್‌ಎಸ್‌ಎಸ್) ಕೈವಾಡ ಇರುವ ಸಾಧ್ಯತೆ ತಳ್ಳಿಹಾಕುವಂತಿಲ್ಲ ಎಂದು ಸಿಂಗ್ ಅಭಿಪ್ರಾಯಪಟ್ಟಿದ್ದಾರೆ. id="toptextpromo">ಈ
ಬಗ್ಗೆ ತನಿಖೆ ನಡೆಸಲು ರಾಷ್ಟ್ರೀಯ ತನಿಖಾ ಏಜೆನ್ಸಿ (ಎನ್‌ಐಎ) ಹಾಗೂ ಮಹಾರಾಷ್ಟ್ರದ ಭಯೋತ್ಪಾದ ನಿಗ್ರಹ ತಂಡಗಳಿಗೆ ಅವಕಾಶ ನೀಡಬೇಕು. ಆದರೆ ಸ್ಫೋಟದಲ್ಲಿ ಹಿಂದು ಸಂಘಟನೆಗಳ ಕೈವಾಡ ಇದೆ ಎಂಬ ಮಾತನ್ನು ತಳ್ಳಿಹಾಕುವಂತಿಲ್ಲ ಎಂದಿದ್ದಾರೆ. ಒಂದು ವೇಳೆ ನ್ಯಾಯಾಲಯ ಬಯಸುವುದಾದರೆ ನನ್ನ ಬಳಿ ಇರುವ ಮಾಹಿತಿಯನ್ನು ಪ್ರಾಮಾಣಿಕವಾಗಿ ನೀಡುವುದಾಗಿ ಸಿಂಗ್ ತಿಳಿಸಿದ್ದಾರೆ. id='are-slot-1' class='oiad oi-axt oiadv'> id='top-searched-articles'>ದಿಗ್ವಿಜಯ್
ಸಿಂಗ್ ಅವರ ವಿವಾದಾತ್ಮಕ ಹೇಳಿಕೆಗೆ ತಕ್ಷಣ ಪ್ರತಿಕ್ರಿಯಿಸಿದ ಬಿಜೆಪಿ ಮುಖಂಡ ಧನಂಜಯಕುಮಾರ್, ಇವರು ಆಧಾರವಿಲ್ಲದ ಹೇಳಿಕೆಗಳನ್ನು ಕೊಟ್ಟು ಜನರ ಗಮನವನ್ನು ಬೇರೆಡೆಗೆ ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆ. ದಿಗ್ವಿಜಯ್ ಸಿಂಗ್ ಮನಬಂದಂತೆ ಹೇಳಿಕೆಗಳನ್ನು ನೀಡುತ್ತಿರುವುದು ಖಂಡನೀಯ. ಇದನ್ನು ನಾವು ತೀವ್ರವಾಗಿ ವಿರೋಧಿಸುತ್ತೇವೆ ಎಂದರು. (ದಟ್ಸ್‌ಕನ್ನಡ ವಾರ್ತೆ)











Click it and Unblock the Notifications