ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮುಂಬೈ ಸ್ಫೋಟದಲ್ಲಿ ಆರ್‌ಎಸ್‌ಎಸ್ ಕೈವಾಡ: ದಿಗ್ವಿಜಯ್ ಸಿಂಗ್

By Rajendra
|
Google Oneindia Kannada News

Digvijay Singh
ನವದೆಹಲಿ, ಜು.16: ಮುಂಬೈ ಸರಣಿ ಬಾಂಬ್ ಸ್ಫೋಟದಲ್ಲಿ (ಜು.13) ಹಿಂದು ಸಂಘಟನೆಗಳ ಕೈವಾಡ ಇರುವ ಸಾಧ್ಯತೆ ಇದೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ದಿಗ್ವಿಜಯ್ ಸಿಂಗ್ ಶನಿವಾರ (ಜು.16) ಆರೋಪಿಸಿದ್ದಾರೆ. ಮುಂಬೈ ಸರಣಿ ಸ್ಫೋಟದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್‌ಎಸ್‌ಎಸ್) ಕೈವಾಡ ಇರುವ ಸಾಧ್ಯತೆ ತಳ್ಳಿಹಾಕುವಂತಿಲ್ಲ ಎಂದು ಸಿಂಗ್ ಅಭಿಪ್ರಾಯಪಟ್ಟಿದ್ದಾರೆ.

ಈ ಬಗ್ಗೆ ತನಿಖೆ ನಡೆಸಲು ರಾಷ್ಟ್ರೀಯ ತನಿಖಾ ಏಜೆನ್ಸಿ (ಎನ್‌ಐಎ) ಹಾಗೂ ಮಹಾರಾಷ್ಟ್ರದ ಭಯೋತ್ಪಾದ ನಿಗ್ರಹ ತಂಡಗಳಿಗೆ ಅವಕಾಶ ನೀಡಬೇಕು. ಆದರೆ ಸ್ಫೋಟದಲ್ಲಿ ಹಿಂದು ಸಂಘಟನೆಗಳ ಕೈವಾಡ ಇದೆ ಎಂಬ ಮಾತನ್ನು ತಳ್ಳಿಹಾಕುವಂತಿಲ್ಲ ಎಂದಿದ್ದಾರೆ. ಒಂದು ವೇಳೆ ನ್ಯಾಯಾಲಯ ಬಯಸುವುದಾದರೆ ನನ್ನ ಬಳಿ ಇರುವ ಮಾಹಿತಿಯನ್ನು ಪ್ರಾಮಾಣಿಕವಾಗಿ ನೀಡುವುದಾಗಿ ಸಿಂಗ್ ತಿಳಿಸಿದ್ದಾರೆ.

ದಿಗ್ವಿಜಯ್ ಸಿಂಗ್ ಅವರ ವಿವಾದಾತ್ಮಕ ಹೇಳಿಕೆಗೆ ತಕ್ಷಣ ಪ್ರತಿಕ್ರಿಯಿಸಿದ ಬಿಜೆಪಿ ಮುಖಂಡ ಧನಂಜಯಕುಮಾರ್, ಇವರು ಆಧಾರವಿಲ್ಲದ ಹೇಳಿಕೆಗಳನ್ನು ಕೊಟ್ಟು ಜನರ ಗಮನವನ್ನು ಬೇರೆಡೆಗೆ ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆ. ದಿಗ್ವಿಜಯ್ ಸಿಂಗ್ ಮನಬಂದಂತೆ ಹೇಳಿಕೆಗಳನ್ನು ನೀಡುತ್ತಿರುವುದು ಖಂಡನೀಯ. ಇದನ್ನು ನಾವು ತೀವ್ರವಾಗಿ ವಿರೋಧಿಸುತ್ತೇವೆ ಎಂದರು. (ದಟ್ಸ್‌ಕನ್ನಡ ವಾರ್ತೆ)

English summary
Senior Congress leader Digvijaya Singh on Friday said involvement of Hindu outfits could not be ruled out in Wednesday’s blasts in Mumbai.Asked if he suspected the involvement of Hindu outfits in the latest Mumbai blasts, Singh told The Indian Express: “Nothing can be ruled out. We should allow the NIA and Anti-Terrorism Squad of Maharashtra to do their jobs. But we cannot rule out anything.”
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X