ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಭಾರೀ ಮಳೆಗೆ ನಡುಗಡ್ಡೆಯಂತಾದ ಭಾಗಮಂಡಲ

By * ಬಿಎಂ ಲವಕುಮಾರ್, ಮೈಸೂರು
|
Google Oneindia Kannada News

Bhagamandala turns island
ಮಡಿಕೇರಿ, ಜು. 18 : ಕೊಡಗಿನಲ್ಲಿ ವರ್ಷಧಾರೆ ಮುಂದುವರೆದಿದ್ದು, ಕಳೆದ ಎರಡು ದಿನಗಳಿಂದ ಧಾರಾಕಾರವಾಗಿ ಸುರಿಯುತ್ತಿರುವ ಮಳೆಗೆ ಭಾಗಮಂಡಲದ ಸಂಗಮ ಕ್ಷೇತ್ರ ಜಲಾವೃತಗೊಂಡು ಇತರೆ ಪ್ರದೇಶಗಳೊಂದಿಗೆ ಸಂಪರ್ಕ ಕಳೆದುಕೊಂಡಿದೆ.

ದಕ್ಷಿಣ ಕೊಡಗಿನ ಶ್ರೀಮಂಗಲದಲ್ಲಿ ಮನೆಯ ಗೋಡೆ ಕುಸಿದು ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಜಿಲ್ಲೆಯಾದ್ಯಂತ ಗ್ರಾಮಾಂತರ ಪ್ರದೇಶಗಳಲ್ಲಿ ವಿದ್ಯುತ್ ಕಂಬಗಳು ಮುರಿದು ಬಿದ್ದಿದ್ದರಿಂದ ವಿದ್ಯುತ್ ಸಂಪರ್ಕ ಕಡಿತಗೊಂಡು ಗ್ರಾಮಗಳೆಲ್ಲ ಕತ್ತಲಲ್ಲಿ ಮುಳುಗಿವೆ.

ನಿನ್ನೆ ಬೆಳಿಗ್ಗೆಯಿಂದ ಮಧ್ಯಾಹ್ನದವರೆಗೆ ಬಿಡುವು ನೀಡಿದ್ದ ಮಳೆ ಸಂಜೆ ವೇಳೆಯಲ್ಲಿ ಮತ್ತೆ ಚೇತರಿಸಿಕೊಂಡು ಧಾರಾಕಾರವಾಗಿ ಸುರಿದಿದ್ದರಿಂದ ಭಾಗಮಂಡಲದಲ್ಲಿ ಕಾವೇರಿ ನೀರಿನ ಹರಿಯುವಿಕೆಯಲ್ಲಿ ಹೆಚ್ಚಳ ಕಂಡು ಬಂದಿದೆ. ಸುಜ್ಯೋತಿ ಹಾಗೂ ಕನ್ನಿಕೆ ನದಿಗಳು ಸೇರುವ ಸಂಗಮ ಜಲಾವೃತಗೊಂಡಿದೆ. ನಾಪೋಕ್ಲಿಗೆ ಸಂಪರ್ಕ ಕಲ್ಪಿಸುವ ಅಯ್ಯಂಗೇರಿ ರಸ್ತೆಯ ಮೇಲೆ ನೀರು ಉಕ್ಕೇರಿದ ಪರಿಣಾಮ ರಸ್ತೆ ಸಂಪರ್ಕ ಕಡಿತಗೊಂಡಿತ್ತು.

ನದಿಯ ನೀರು ಭತ್ತದ ಗದ್ದೆಗಳಿಗೆ ನುಗ್ಗಿದ ಪರಿಣಾಮ ಚೇರಂಬಾಣೆ, ಚೆಟ್ಟಿಮಾನಿ, ಕೋಪಟ್ಟಿಯ ಗದ್ದೆಬಯಲುಗಳು ಜಲಾವೃತಗೊಂಡಿವೆ. ಇನ್ನೂ ಗದ್ದೆಯಲ್ಲಿ ನಾಟಿ ಕಾರ್ಯ ಆರಂಭಿಸಿಲ್ಲದ ಕಾರಣ ಯವುದೇ ನಷ್ಟವಾಗಿಲ್ಲ. ಕೆಲವೆಡೆ ಮನೆಗಳ ಮೇಲೆ ಮರಗಳು ಮುರಿದು ಬಿದ್ದು ನಷ್ಟ ಉಂಟುಮಾಡಿವೆ.

ಮಹಿಳೆ ಸಾವು : ದಕ್ಷಿಣ ಕೊಡಗಿನ ಶ್ರೀಮಂಗಲದಲ್ಲಿ ಮಸೀದಿಯ ಗೋಡೆಗೆ ಹೊಂದಿಕೊಂಡಂತೆ ಕಟ್ಟಿಕೊಂಡಿದ್ದ ಮನೆಯ ಮನೆಯ ಗೋಡೆ ಕುಸಿದು ಬಿದ್ದು ಫಾತಿಮಾ ಎಂಬ ಮಹಿಳೆ ಸಾವನ್ನಪ್ಪಿದ್ದಾರೆ. ಆದರೆ ಮನೆಯ ಮತ್ತೊಂದು ಕೊಠಡಿಯಲ್ಲಿ ಮಲಗಿದ್ದ ಪತಿ ಯೂಸುಫ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಹಾರಂಗಿ ಜಲಾಶಯಕ್ಕೆ ಹೆಚ್ಚಿನ ನೀರು ಹರಿದು ಬರುತ್ತಿದ್ದು, ಹೆಚ್ಚುವರಿ ನೀರನ್ನು ನದಿಗೆ ಬಿಡಲಾಗುತ್ತಿದೆ. ಕಾವೇರಿ, ಲಕ್ಷ್ಮಣತೀರ್ಥ ನದಿಗಳು ತುಂಬಿ ಹರಿಯುತ್ತಿದ್ದು, ಕೆಆರ್‌ಎಸ್ ಜಲಾಶಯ ಸದ್ಯದಲ್ಲಿಯೇ ಭರ್ತಿಯಾಗುವ ಸಾಧ್ಯತೆ ಹೆಚ್ಚಾಗಿದೆ.

English summary
Due to incessant rain in Madikeri district Bhagamandala sangama is completely water clogged. One woman died due to wall collapse in south Coorg. Excessive water has been released from Harangi dam. Kaveri and Lakshmana Teertha are overflowing.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X