ತುಮಕೂರು, ಜು. 20 : ತುಮಕೂರಿನಿಂದ ಹಿಂದೂಪುರಕ್ಕೆ ಹೊರಟಿದ್ದ ಖಾಸಗಿ ಬಸ್ ಮಧುಗಿರಿ ಬಳಿಯ ದೊಡ್ಡಮಾಲೂರು ಕೆರೆಯಲ್ಲಿ ತಲೆಕೆಳಗಾಗಿ ಬಿದ್ದ ಪರಿಣಾಮ ನಾಲ್ವರು ಸ್ಥಳದಲ್ಲೇ ಸತ್ತು 30ಕ್ಕೂ ಹೆಚ್ಚು ಜನ ಗಾಯಗೊಂಡ ಘಟನೆ ಬುಧವಾರ ಮಧ್ಯಾಹ್ನ ಜರುಗಿದೆ.
ಅಪಘಾತಕ್ಕೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ. ಗಾಯಗೊಂಡವರನ್ನು ಸ್ಥಳೀಯ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರು ಮತ್ತು ರಕ್ಷಣಾ ಸಿಬ್ಬಂದಿ ಸ್ಧಳಕ್ಕೆ ದಾವಿಸಿದ್ದಾರೆ. ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ.