ಮರೆಯಾಗುತ್ತಿರುವ ತುಳುನಾಡ ಆಚರಣೆ ಆಟಿಡೊಂಜಿ

ಅವರು ಪಿಲಿಕುಳ ನಿಸರ್ಗಧಾಮ ಸಂಸ್ಕೃತಿ ಗ್ರಾಮ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ, ಮಂಗಳೂರು ತಾಲೂಕು ಮಹಿಳಾಮಂಡಲಗಳ ಒಕ್ಕೂಟ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಸಂಸ್ಕೃತಿ ಗ್ರಾಮದ ಗುತ್ತಿನ ಮನೆಯಲ್ಲಿ ಸೋಮವಾರ ಜರುಗಿದ ಆಟಿಡೊಂಜಿ ದಿನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.
ಆಟಿಡೊಂಜಿ ದಿನ ಕಾರ್ಯಕ್ರಮವನ್ನು ಅತ್ಯಂತ ವೈಶಿಷ್ಟ್ಯಪೂರ್ಣವಾಗಿ ಆಯೋಜಿಸುವ ಮೂಲಕ ಗುತ್ತಿನ ಮನೆಯಲ್ಲಿ ತುಳುನಾಡಿನ ಆಚರಣೆಗಳನ್ನು ನೆನಪಿಸುವ ಕಾರ್ಯ ನಡೆದಿದೆ ಎಂದು ಶ್ಲಾಘಿಸಿದರು. ಕಾರ್ಯಕ್ರಮವನ್ನು ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಕೆ.ಟಿ. ಶೈಲಜಾ ಭಟ್ ಉದ್ಘಾಟಿಸಿದರು.
ಪ್ರಾಚ್ಯ ವಸ್ತುಗಳ ಪ್ರದರ್ಶನವನ್ನು ಉದ್ಘಾಟಿಸಿದ ಕ್ಯಾಂಪ್ಕೋ ಅಧ್ಯಕ್ಷ ಕೊಂಕೋಡಿ ಪದ್ಮನಾಭ ಅವರು, ಪಿಲಿಕುಳವನ್ನು ತುಳುವರ ಕಲಾಕೇಂದ್ರವಾಗಿ ಬೆಳೆಸುವ ನಿಟ್ಟಿನಲ್ಲಿ ಎಲ್ಲರೂ ಕೈಜೋಡಿಸಬೇಕು ಎಂದು ನುಡಿದರು. ಕರಕುಶಲ ವಸ್ತುಗಳ ಪ್ರದರ್ಶನವನ್ನು ಜಿಲ್ಲಾ ಕಸಾಪ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ ಉದ್ಘಾಟಿಸಿದರು.
ಆಟಿ ಆಡುಗೆ ಸಡಗರವನ್ನು ಉದ್ಘಾಟಿಸಿದ ಜಿಲ್ಲಾಧಿಕಾರಿ ಡಾ| ಎನ್.ಎಸ್. ಚನ್ನಪ್ಪ ಗೌಡ ಅವರು, ನಮ್ಮ ಪೂರ್ವಜರ ಅನೇಕ ಆಚರಣೆಗಳು, ವಿಚಾರಗಳ ಹಿಂದೆ ವೈಜ್ಞಾನಿಕ ಕಾರಣಗಳು ಇದ್ದೇ ಇರುತ್ತದೆ. ಆದರೆ ಅವುಗಳನ್ನು ಸರಿಯಾಗಿ ಅರ್ಥೈಸಿಕೊಳ್ಳದೆ ಮೂಢನಂಬಿಕೆಗಳೆಂದು ಪ್ರತಿಬಿಂಬಿಸುವ ಪ್ರಯತ್ನಗಳಿಂದ ಹಿನ್ನೆಡೆಯುಂಟಾಗಿದೆ ಎಂದು ವಿವರಿಸಿದರು.
ಆಟಿಯ ಮಹತ್ವದ ಬಗ್ಗೆ ಮಂಗಳೂರು ವಿವಿ ಕನ್ನಡ ಪ್ರಾಧ್ಯಾಪಕ ಡಾ| ಬಿ.ಶಿವರಾಮ ಶೆಟ್ಟಿ ಅವರು ಮಾತನಾಡಿ, ತುಳುನಾಡಿನ ಕೃಷಿ ಸಂಸ್ಕೃತಿ ನಿಸರ್ಗದೊಂದಿಗೆ ಬೆಸೆದುಕೊಂಡಿದೆ. ಆಟಿಯ ಆಚರಣೆಗಳು ಕೇವಲ ಪ್ರದರ್ಶನ ನೆಲೆಯಲ್ಲಿ ಆಗದೆ ಕೃಷಿ ಸಂಸ್ಕೃತಿ, ನಿಸರ್ಗವನ್ನು ಸಂರಕ್ಷಿಸುವ ನಿಟ್ಟಿನಲ್ಲಿ ಪ್ರೇರಣೆ ನೀಡಬೇಕು ಎಂದರು.
ಮೇಯರ್ ಪ್ರವೀಣ್, ಜಿ.ಪಂ. ಸದಸ್ಯೆ ಯಶವಂತಿ ಆಳ್ವ, ತಾ.ಪಂ. ಸದಸ್ಯ ಹರೀಶ್, ಮೂಡುಶೆಡ್ಡೆ ಗ್ರಾ.ಪಂ. ಅಧ್ಯಕ್ಷ ಜೆ. ಉಮೇಶ್, ಮಂಗಳೂರು ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ಅಧ್ಯಕ್ಷೆ ವಿಜಯಲಕ್ಷಿ ಬಿ. ಶೆಟ್ಟಿ ಅವರು ಅತಿಥಿಗಳಾಗಿದ್ದರು. ಪಿಲಿಕುಳ ನಿಸರ್ಗಧಾಮದ ಕಾರ್ಯನಿರ್ವಾಹಕ ನಿರ್ದೇಶಕ ಜೆ. ಆರ್. ಲೋಬೋ ಸ್ವಾಗತಿಸಿದರು.
-
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ -
Anushka Shetty Marriage: ಬೆಂಗಳೂರಿನ ಖ್ಯಾತ ಉದ್ಯಮಿ ಜೊತೆ ನಟಿ ಅನುಷ್ಕಾ ಶೆಟ್ಟಿ ಮದುವೆ, ಈ ವರ್ಷದಲ್ಲೇ ಮುಹೂರ್ತ: ವರದಿ -
1 ರೂಪಾಯಿಗೆ 1 ಲೀಟರ್ ಹಾಲು: ಫ್ಲಿಪ್ಕಾರ್ಟ್ ವಿರುದ್ಧ ಸಿಡಿದೆದ್ದ ಡಿ.ಕೆ. ಸುರೇಶ್; ಪ್ರಧಾನಿ ಮೋದಿಗೆ ದೂರು -
ಬಿಜೆಪಿಯಿಂದ ನಟ ವಿಜಯ್ಗೆ ಡಿಸಿಎಂ ಹುದ್ದೆ, 80 ಸೀಟುಗಳ ಆಫರ್; ತಮಿಳುನಾಡು ಚುನಾವಣೆಗೆ ಹೊಸ ಮೈತ್ರಿ ಲೆಕ್ಕಾಚಾರ -
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
LPG New Rule: ಎಲ್ಪಿಜಿ ಹೊಸ ನಿಯಮ: ಪಿಎನ್ಜಿ ಸಂಪರ್ಕ ಇದ್ದರೆ ಇನ್ನು ಮುಂದೆ ಸಿಲಿಂಡರ್ ಸಿಗಲ್ಲ -
Government Employees: ಪಶ್ಚಿಮ ಬಂಗಾಳ ಸರ್ಕಾರಿ ನೌಕರರಿಗೆ ಸಿಎಂ ಮಮತಾ ಬ್ಯಾನರ್ಜಿ ಬಂಪರ್ ಕೊಡುಗೆ -
ರಾಜ್ಯದಲ್ಲಿ ಕಮರ್ಷಿಯಲ್ ಉದ್ದೇಶಕ್ಕೆ ಗೃಹಬಳಕೆ LPG ಸಿಲಿಂಡರ್ ಬಳಸಿದವರ ಮೇಲೆ ಅಧಿಕಾರಿಗಳ ಖಡಕ್ ದಾಳಿ -
ಬೆಂಗಳೂರು 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ vs ಹೊಸೂರು ಏರ್ಪೋರ್ಟ್: ಯೋಜನೆ ಯಾವ ಹಂತದಲ್ಲಿದೆ












Click it and Unblock the Notifications