ಯಾರು ಇದ್ರು ಹೋದ್ರೂ ನನಗೆ ಚಿಂತೆ ಇಲ್ಲ; ಸಂತೋಷ್ ಹೆಗ್ಡೆ
ಬೆಂಗಳೂರು,
ಜು.28: ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ರಾಜೀನಾಮೆ ನೀಡುವಂತೆ ಬಿಜೆಪಿಯ ಹೈಕಮಾಂಡ್ ಆದೇಶಿಸಿದೆ. ಈ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಲೋಕಾಯುಕ್ತ ನ್ಯಾಯಮೂರ್ತಿ ಎನ್ ಸಂತೋಷ್ ಹೆಗ್ಡೆ, ಯಾರು ಇದ್ರೂ ಹೋದ್ರೂ ನನಗೆ ಚಿಂತೆ ಇಲ್ಲ ಎಂದಿದ್ದಾರೆ. id="toptextpromo">ನನ್ನ
ಕರ್ತವ್ಯವನ್ನು ನಾನು ನಿಭಾಯಿಸಿದ್ದೇನೆ. ನನಗೆ ರಾಜಕೀಯದಲ್ಲಿ ಆಸಕ್ತಿ ಇಲ್ಲ. ಯಡಿಯೂರಪ್ಪನವರ ರಾಜೀನಾಮೆ ಬಗ್ಗೆ ಪ್ರತಿಕ್ರಿಯಿಸುವುದಿಲ್ಲ ಎಂದಿದ್ದಾರೆ. ಯಾರು ಇದ್ರೂ ಹೋದ್ರೂ ನನಗೇನು ಆಗಬೇಕಿಲ್ಲ ಎಂದು ಅವರು ಪತ್ರಕರ್ತರೊಂದಿಗೆ ಮಾತನಾಡುತ್ತಾ ಪ್ರತಿಕ್ರಿಯಿಸಿದರು. id='are-slot-1' class='oiad oi-axt oiadv'> id='top-searched-articles'>ಅಕ್ರಮ
ಗಣಿಗಾರಿಕೆಗೆ ಸಂಬಂಧಿಸಿದಂತೆ ಕಪ್ಪ ಪಡೆದ ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಕ್ರಮ ಕೈಗೊಳ್ಳುವಂತೆ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ರಾಜ್ಯಪಾಲರಿಗೆ ಮನವಿ ಮಾಡಿದ್ದನ್ನು ಇಲ್ಲಿ ಸ್ಮರಿಸಬಹುದು. (ದಟ್ಸ್‌ಕನ್ನಡ ವಾರ್ತೆ)











Click it and Unblock the Notifications