ಸಂತೋಷ್ ಹೆಗ್ಡೆ ಭಾವಚಿತ್ರಕ್ಕೆ ಹಾಲಿನ ಅಭಿಷೇಕ

ಅಕ್ರಮ ಗಣಿಗಾರಿಕೆ ಬಗ್ಗೆ ಸಮಗ್ರ ತನಿಖೆ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಿರುವ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಅವರ ಭಾವಚಿತ್ರಕ್ಕೆ ಕ್ಷೀರಾಭಿಷೇಕ ಮಾಡಿ ಸಂಭ್ರಮಿಸಿದ್ದಾರೆ ದಲಿತ್ ಪ್ಯಾಂಥರ್ಸ್ ಆಫ್ ಇಂಡಿಯಾ ಸಂಘಟನೆ ಕಾರ್ಯಕರ್ತರು.
ಈ ವಿನೂತನ ಕಾರ್ಯಕ್ರಮ ನಗರದ ಬಿಟಿಎಂ ಬಡಾವಣೆಯಲ್ಲಿ ಗುರುವಾರ ನಡೆಯಿತು. ಹೆಗ್ಡೆ ಅವರ ಬೃಹತ್ ಗಾತ್ರದ ಭಾವಚಿತ್ರಕ್ಕೆ ಮಹಿಳೆಯರು ಕ್ಷೀರಾಭಿಷೇಕ ಮಾಡಿದರು. ಹೆಗ್ಡೆ ಅವರಿಗೆ ಪ್ರಾಣ ಬೆದರಿಕೆ ಇದ್ದರೂ ಅದ್ಯಾವುದನ್ನೂ ಲೆಕ್ಕಿಸದೆ ಅವರು ತನಿಖೆ ನಡೆಸಿ ಅಕ್ರಮ ಗಣಿಗಾರಿಕೆ ಮಾಡಿದವರನ್ನು ಕಟೆಕಟೆಯಲ್ಲಿ ನಿಲ್ಲಿಸಿದ್ದಾರೆ ಎಂದರು.
ಹೆಗ್ಡೆ ಅವರು ಶ್ಲಾಘನೀಯ ಕೆಲಸ ಮಾಡಿದ್ದಾರೆ. ಅಕ್ರಮ ಗಣಿಗಾರಿಕೆ ವರದಿಯಲ್ಲಿನ ತಪ್ಪಿತಸ್ಥರನ್ನು ಕೂಡಲೆ ಬಂಧಿಸಬೇಕು. ಅವರೆಲ್ಲರಿಗೂ ಕಠಿಣ ಶಿಕ್ಷೆಯಾಗಬೇಕು ಎಂದು ಸಂಘಟನೆಯ ಬೆಂಗಳೂರು ಜಿಲ್ಲಾಧ್ಯಕ್ಷ ಆರ್ ಮಂಜುನಾಥ್ ಆಗ್ರಹಿಸಿದರು. ಈ ಸಂದರ್ಭದಲ್ಲಿ ಸಂಘಟನೆಯ ಪ್ರಧಾನ ಕಾರ್ಯದರ್ಶಿ ಎಚ್ ವಿ ಚಂದ್ರಶೇಖರ್ ಅವರು ಉಪಸ್ಥಿತರಿದ್ದರು.











Click it and Unblock the Notifications