'ಮಾತಾ' ಸೋಮಣ್ಣ ವಿರುದ್ಧ ಸುಪ್ರೀಂಕೋರ್ಟ್ ತನಿಖೆ

ಈ ಸಂಬಂಧ ವಸತಿ ಸಚಿವ ವಿ. ಸೋಮಣ್ಣ ವಿರುದ್ಧ ಕ್ರಮ ಕೈಗೊಳ್ಳುವಂತೆ ಧಾರವಾಡದ ಸಮಾಜ ಪರಿವರ್ತನಾ ಸಮುದಾಯವು ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. ಹೀಗಾಗಿ, ಹೆಚ್ಚಿನ ತನಿಖೆ ನಡೆಸುವಂತೆ ಸುಪ್ರೀಂಕೋರ್ಟ್‌ನ ಕೇಂದ್ರ ಉನ್ನತಾಧಿಕಾರ ಸಮಿತಿಗೆ (ಸಿಇಸಿ) ಆದೇಶಿಸಲಾಗಿದೆ.
ಸಮುದಾಯದ ಕಾರ್ಯನಿರ್ವಾಹಕ ನಿರ್ದೇಶಕ ಎಸ್. ಆರ್. ಹಿರೇಮಠ ಅವರು ಬಳ್ಳಾರಿಯಲ್ಲಿನ ಅಕ್ರಮ ಗಣಿಗಾರಿಕೆ ಕುರಿತು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ತುಮಕೂರು ಮತ್ತು ಚಿತ್ರದುರ್ಗ ಜಿಲ್ಲೆಯಲ್ಲಿನ ಅಕ್ರಮ ಗಣಿಗಾರಿಕೆಯ ಸಂಬಂಧ ಇತ್ತೀಚೆಗೆ ಮತ್ತೊಂದು ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯಲ್ಲಿ ಸೋಮಣ್ಣ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಲಾಗಿದೆ.
'ಅಪ್ಪ ತುಮಕೂರು ಜಿಲ್ಲೆಯ ಉಸ್ತುವಾರಿ ಸಚಿವರು. ಅವರ ಮಕ್ಕಳ ಒಡೆತನದಲ್ಲಿರುವ ಮಾತಾ ಮಿನರಲ್ಸ್ ಕಂಪನಿ ಅದೇ ಜಿಲ್ಲೆಯಲ್ಲಿ ಅಕ್ರಮ ಗಣಿಗಾರಿಕೆ ನಡೆಸುತ್ತಿದೆ. ಈ ಪ್ರಕರಣದಲ್ಲಿ ಸಚಿವರು ತಮ್ಮ ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದಾರೆ' ಎಂದು ಅರ್ಜಿಯಲ್ಲಿ ದೂರಲಾಗಿದೆ.












Click it and Unblock the Notifications