ಹೊಸಕೆರೆಹಳ್ಳಿಯಲ್ಲಿ ಬಿಡಿಎಯಿಂದ ಭರ್ಜರಿ ಬೇಟೆ

ಸೋಮವಾರ ಆರಂಭವಾದ ಈ ಅಕ್ರಮ ಕಟ್ಟಡ ನೆಲಸಮ ಕಾರ್ಯಾಚರಣೆ ಮಂಗಳವಾರ ಕೂಡಾ ಮುಂದುವರೆದಿದೆ. ಸೋಮವಾರ ಅಂಗಡಿ ಮಾಲೀಕರು ಪ್ರತಿಭಟನೆ ನಡೆಸಿ ಆತಂಕದ ವಾತಾವರಣ ಸೃಷ್ಟಿಸಿದ್ದರು. ಪರಿಸ್ಥಿತಿ ಕೈ ಮೀರಿದಾಗ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿ ಪ್ರತಿಭಟನಾಕಾರರನ್ನು ಚದುರಿಸಿದ್ದರು. ಇಂದು ಎರಡು ತುಕಡಿಯಲ್ಲಿ ಬಂದ ಪೊಲೀಸರ ಸರ್ಪಗಾವಲಿನಲ್ಲಿ ಕಟ್ಟಡ ನೆಲಸಮ ಕಾರ್ಯಾಚರಣೆ ಮುಂದುವರೆದಿದೆ.
ವಿಶ್ವ ಭಾರತಿ ಹೌಸಿಂಗ್ ಸೊಸೈಟಿಗೆ ಸೇರಿದ ಜಾಗದಲ್ಲಿ ಕೆಲವರು ಅಕ್ರಮವಾಗಿ ಮನೆ, ಅಂಗಡಿ ಮಳಿಗೆಗಳನ್ನು ನಿರ್ಮಿಸಿಕೊಂಡಿದ್ದರು. ಈ ಕಟ್ಟಡಗಳನ್ನು ನೆಲಸಮಗೊಳಿಸಲು ಬಿಡಿಎ ಸೋಮವಾರ ಬೆಳಿಗ್ಗೆ 9 ಗಂಟೆಗೆ ಕಾರ್ಯಾಚರಣೆ ಆರಂಭಿಸಿತ್ತು.
ಬಸ್ ಬದಲಿ ಮಾರ್ಗ: ಶ್ರೀವಿದ್ಯಾನಗರಕ್ಕೆ ಹೊಂದಿಕೊಂಡತೆ ಇರುವ ರಸ್ತೆಯಲ್ಲಿ ಉಂಟಾಗಿರುವ ಆತಂಕದ ಪರಿಸ್ಥಿತಿ ಅರಿತ ಬಿಎಂಟಿಸಿ ಬಸ್ ಡ್ರೈವರ್ ಗಳು ಕತ್ರಿಗುಪ್ಪೆ ಮಾರ್ಗ ಹಿಡಿದಿದ್ದು ಸಾರ್ವಜನಿಕರಿಗೆ ತಿಳಿಯದೆ ಪರದಾಡಬೇಕಾಯಿತು. ಮೆಜೆಸ್ಟಿಕ್, ಮಾರ್ಕೆಟ್, ವಿಧಾನಸೌಧ ಜಯನಗರ ಕಡೆಗೆ ತೆರಳಬೇಕಾಗಿದ್ದ ಜನರು ಬಸ್ ಬದಲಿ ಮಾರ್ಗ ಬಗ್ಗೆ ತಿಳಿಯದೆ ಸುತ್ತಿ ಬಳಸಿ ಬಸ್ ನಿಲ್ದಾಣ ಹುಡುಕುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು.
ಕಟ್ಟಡ ನೆಲಸಮ ಮಾಡುವುದಕ್ಕೆ ಸ್ಥಳೀಯರು ತೀವ್ರ ವಿರೋಧ ವ್ಯಕ್ತಪಡಿಸಿದರು. ಕಟ್ಟಡಗಳನ್ನು ತೆರವುಗೊಳಿಸದಂತೆ ಹೈಕೋರ್ಟ್ ಆದೇಶ ನೀಡಿದೆ ಆದರೆ ಬಿಡಿಎ ಅಧಿಕಾರಿಗಳು ಯಾವುದನ್ನೂ ಲೆಕ್ಕಿಸದೆ ಮನೆ- ಅಂಗಡಿಗಳನ್ನು ನೆಲಸಮಗೊಳಿಸಿದ್ದಾರೆ ಎಂದು ಅಂಗಡಿ ಮಾಲೀಕರು ಪ್ರತಿಭಟನೆ ನಡೆಸಿದ್ದರು.
-
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Amala Paul: ಡೇಟಿಂಗ್ನಲ್ಲೇ ಗರ್ಭಿಣಿಯಾದೆ, ಆತುರದಲ್ಲಿ ಎರಡನೇ ಮದುವೆ ಆಯ್ತು: ಹೆಬ್ಬುಲಿ ನಟಿ ಅಮಲಾ ಪೌಲ್ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ












Click it and Unblock the Notifications