ರಾಷ್ಟ್ರಪತಿ ಆಳ್ವಿಕೆ ಹೇರುವುದಿಲ್ಲ; ರಾಜ್ಯಪಾಲ ಭಾರದ್ವಾಜ್

ಲೋಕಾಯುಕ್ತರ ಶಿಫಾರಸ್ಸಿನಂತೆ ಯಡಿಯೂರಪ್ಪ ಮತ್ತು ಮೂವರು ಮಂತ್ರಿಗಳನ್ನು ಬಂಧನಕ್ಕೊಳಪಡಿಸಿ ಅವರ ವಿರುದ್ಧ ಕ್ರಮ ಜರುಗಿಸಲು ರಾಜ್ಯಪಾಲರಿಗೆ ಒಂದು ತಿಂಗಳ ಸಮಯವಕಾಶವಿತ್ತು, ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿಯಲ್ಲಿ ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಲು ಸರ್ಕಾರ ವಿಫಲವಾದ ಹಿನ್ನೆಲೆಯಲ್ಲಿ ರಾಜ್ಯಪಾಲರು ಈ ಕ್ರಮ ಕೈಗೊಂಡಿದ್ದಾರೆ.
ಸದಾನಂದ ಗೌಡ ಸೂಕ್ತ: ಮುಖ್ಯಮಂತ್ರಿ ಆಯ್ಕೆ ಗೊಂದಲದ ನಡುವೆ ತಮ್ಮ ಆಯ್ಕೆ ಸದಾನಂದ ಗೌಡ ಎಂದು ರಾಜ್ಯಪಾಲರು ಹೇಳಿದ್ದಾರೆ. ಸದಾನಂದ ಗೌಡರು ಜವಾಬ್ದಾರಿಯುತ ಸ್ಥಾನವನ್ನು ಸಮರ್ಥವಾಗಿ ನಿಭಾಯಿಸಬಲ್ಲರು ಎಂದಿದ್ದಾರೆ.
ಹೊಸ ಮುಖ್ಯಮಂತ್ರಿ ಆಯ್ಕೆ ಮಾಡಲು ಬಿಜೆಪಿಗೆ ಸಾಕಷ್ಟು ಕಾಲಾವಕಾಶವಿದೆ. ಒಂದು ವೇಳೆ ಸರ್ಕಾರ ಪತನವಾದರೆ ಮಾತ್ರ ರಾಷ್ಟ್ರಪತಿ ಆಳ್ವಿಕೆಯ ಬಗ್ಗೆ ಚರ್ಚಿಸುತ್ತೇನೆ ಎಂದಿದ್ದಾರೆ. ಹಿಂದೆ ಒಮ್ಮೆ ರಾಷ್ಟ್ರಪತಿ ಆಳ್ವಿಕೆಗೆ ಶಿಫಾರಸು ಮಾಡಿ ಮುಖಭಂಗ ಅನುಭವಿಸಿದ್ದ ಹಂಸರಾಜ್, ಮತ್ತೆ ಆ ತಪ್ಪು ಮಾಡದಂತೆ ಎಚ್ಚರಿಕೆ ವಹಿಸಿದ್ದಾರೆ.












Click it and Unblock the Notifications