ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಷ್ಟ್ರಪತಿ ಆಳ್ವಿಕೆ ಹೇರುವುದಿಲ್ಲ; ರಾಜ್ಯಪಾಲ ಭಾರದ್ವಾಜ್

By Mahesh
|
Google Oneindia Kannada News

Pratibha Patil
ಬೆಂಗಳೂರು ಆ.3: ಲೋಕಾಯುಕ್ತ ಗಣಿ ವರದಿ ಆಧಾರದ ಮೇಲೆ ಹಂಗಾಮಿ ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ಅನುಮತಿ ನೀಡಿದ್ದಾರೆ. ಇದರ ಜೊತೆಗೆ ರಾಜ್ಯದ ರಾಜಕೀಯ ಅತಂತ್ರ ಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದು, ರಾಷ್ಟ್ರಪತಿ ಆಳ್ವಿಕೆ ಹೇರಿಕೆ ಪರಿಸ್ಥಿತಿ ಉದ್ಭವಿಸಿಲ್ಲ ಎಂದಿದ್ದಾರೆ.

ಲೋಕಾಯುಕ್ತರ ಶಿಫಾರಸ್ಸಿನಂತೆ ಯಡಿಯೂರಪ್ಪ ಮತ್ತು ಮೂವರು ಮಂತ್ರಿಗಳನ್ನು ಬಂಧನಕ್ಕೊಳಪಡಿಸಿ ಅವರ ವಿರುದ್ಧ ಕ್ರಮ ಜರುಗಿಸಲು ರಾಜ್ಯಪಾಲರಿಗೆ ಒಂದು ತಿಂಗಳ ಸಮಯವಕಾಶವಿತ್ತು, ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿಯಲ್ಲಿ ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಲು ಸರ್ಕಾರ ವಿಫಲವಾದ ಹಿನ್ನೆಲೆಯಲ್ಲಿ ರಾಜ್ಯಪಾಲರು ಈ ಕ್ರಮ ಕೈಗೊಂಡಿದ್ದಾರೆ.

ಸದಾನಂದ ಗೌಡ ಸೂಕ್ತ: ಮುಖ್ಯಮಂತ್ರಿ ಆಯ್ಕೆ ಗೊಂದಲದ ನಡುವೆ ತಮ್ಮ ಆಯ್ಕೆ ಸದಾನಂದ ಗೌಡ ಎಂದು ರಾಜ್ಯಪಾಲರು ಹೇಳಿದ್ದಾರೆ. ಸದಾನಂದ ಗೌಡರು ಜವಾಬ್ದಾರಿಯುತ ಸ್ಥಾನವನ್ನು ಸಮರ್ಥವಾಗಿ ನಿಭಾಯಿಸಬಲ್ಲರು ಎಂದಿದ್ದಾರೆ.

ಹೊಸ ಮುಖ್ಯಮಂತ್ರಿ ಆಯ್ಕೆ ಮಾಡಲು ಬಿಜೆಪಿಗೆ ಸಾಕಷ್ಟು ಕಾಲಾವಕಾಶವಿದೆ. ಒಂದು ವೇಳೆ ಸರ್ಕಾರ ಪತನವಾದರೆ ಮಾತ್ರ ರಾಷ್ಟ್ರಪತಿ ಆಳ್ವಿಕೆಯ ಬಗ್ಗೆ ಚರ್ಚಿಸುತ್ತೇನೆ ಎಂದಿದ್ದಾರೆ. ಹಿಂದೆ ಒಮ್ಮೆ ರಾಷ್ಟ್ರಪತಿ ಆಳ್ವಿಕೆಗೆ ಶಿಫಾರಸು ಮಾಡಿ ಮುಖಭಂಗ ಅನುಭವಿಸಿದ್ದ ಹಂಸರಾಜ್, ಮತ್ತೆ ಆ ತಪ್ಪು ಮಾಡದಂತೆ ಎಚ್ಚರಿಕೆ ವಹಿಸಿದ್ದಾರೆ.

English summary
Time is not ripe to impose President rule in Karnataka: Governor Hansraj Bhardwaj. Governor also said Sadananda Gowda is suitable candidate to become next CM of Karnataka.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X