ಸದಾನಂದರ ನಗು ತಗ್ಗಿಸುವುದೆ ಶೆಟ್ಟರ್ ಕೋಪ?

ಜಗದೀಶ್ ಶೆಟ್ಟರ್ ಅವರ ಜೊತೆ ಆರ್ ಅಶೋಕ್, ವಿಶ್ವೇಶ್ವರ ಹೆಗಡೆ ಕಾಗೇರಿ, ಬಾಲಚಂದ್ರ ಜಾರಕಿಹೊಳಿ, ಅನಂತ್ ಕುಮಾರ್ ಮುಂತಾದವರು ಸೇರಿದ್ದಾರೆ. ಪ್ರಮಾಣ ವಚನ ಕಾರ್ಯಕ್ರಮಕ್ಕೆ ಯಾವುದೇ ಆಹ್ವಾನ ಬಂದಿಲ್ಲ, ಬಂದರೆ ಬರುವುದೂ ಇಲ್ಲ ಎಂದು ಆರ್ ಅಶೋಕ್ ಸ್ಪಷ್ಟಪಡಿಸಿದ್ದಾರೆ.
ಸಮನ್ವಯ ಸಮಿತಿ ಸಭೆ : ಬಿಜೆಪಿ ಶಾಸಕಾಂಗ ಪಕ್ಷದ ನಾಯಕನಾಗಿ ಡಿವಿ ಸದಾನಂದ ಗೌಡರ ಆಯ್ಕೆ ಮತ್ತು ಖಾತೆ ಹಂಚಿಕೆ ಕುರಿತಂತೆ ಬಿಜೆಪಿಯಲ್ಲಿ ಎದ್ದಿರುವ ಭಿನ್ನಮತವನ್ನು ಮೊಗ್ಗಿನಲ್ಲೇ ಚಿವುಟಿ ಹಾಕುವ ಯತ್ನವಾಗಿ ಗುರುವಾರ ಮಧ್ಯಾಹ್ನ 12 ಗಂಟೆಗೆ ಸಮನ್ವಯ ಸಮಿತಿ ಸಭೆ ಕರೆಯಲಾಗಿದೆ ಎಂದು ತಿಳಿದುಬಂದಿದೆ.
;











Click it and Unblock the Notifications