ನನ್ನನ್ನು ಹರಕೆಯ ಕುರಿ ಮಾಡಿದ್ದಾರೆ: ಯಡ್ಡಿ ಅಳಲು
ಬೆಂಗಳೂರು,
ಆ. 4: ವಿರೋಧ ಪಕ್ಷಗಳು ಸೇರಿದಂತೆ ಹಲವರ ಸಂಚಿಗೆ ತಾನು ಬಲಿಯಾಗಿ ಹರಕೆಯ ಕುರಿಯಾಗಿದ್ದೇನೆ ಎಂದು ಹಂಗಾಮಿ ಮುಖ್ಯಮಂತ್ರಿ ಯಡಿಯೂರಪ್ಪ ವಿಷಾದ ವ್ಯಕ್ತಪಡಿಸಿದ್ದಾರೆ. ಆರು ತಿಂಗಳಲ್ಲಿ ತಾನು ಎಲ್ಲ ಆರೋಪಗಳಿಂದ ಮುಕ್ತ ನಾಗಿ ಮತ್ತೊಮ್ಮೆ ಮುಖ್ಯ ಮಂತ್ರಿಯಾಗಿ ಬರುವೆ ಎಂದು ಪುನರುಚ್ಚರಿಸಿದ್ದಾರೆ. id="toptextpromo">ಪ್ರಜಾಪ್ರಭುತ್ವ
ವ್ಯವಸ್ಥೆಯಲ್ಲಿ ಮುಖ್ಯಮಂತ್ರಿ ಸ್ಥಾನ ಬದಲಾಗುವುದು ಸಹಜ. ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರುವುದರಿಂದ ನನ್ನ ಬಲ ಕುಂದಿಲ್ಲ,ಮೂರು ವರ್ಷಗಳ ಕಾಲ ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಲು ಸಹಕರಿಸಿದ ಎಲ್ಲರಿಗೂ ನಾನು ಕೃತಜ್ಞತೆ ಸಲ್ಲಿಸುತ್ತೇನೆ. ಮತ್ತೊಮ್ಮೆ ನಿಮ್ಮ ಆಶೀರ್ವಾದ ಬೇಡಲು ಬರುತ್ತೇನೆ ಎಂದು ಯಡಿಯೂರಪ್ಪ ಹೇಳಿದ್ದಾರೆ. id='are-slot-1' class='oiad oi-axt oiadv'> id='top-searched-articles'>ನೂತನ
ಮುಖ್ಯಮಂತ್ರಿ ಸದಾನಂದ ಗೌಡರಿಗೆ ಅಗತ್ಯ ಸಹಕಾರ ನೀಡುವೆ. ನಾಳೆಯಿಂದ ರಾಜ್ಯಾದ್ಯಂತ ಪ್ರವಾಸ ಕೈಗೊಂಡು ಪಕ್ಷದ ಸಂಘಟನೆಗಾಗಿ ಶ್ರಮಿಸುವೆ ಎಂದು ಬಿಜೆಪಿಯನ್ನು ರಾಜ್ಯದಲ್ಲಿ ಮತ್ತೊಮ್ಮೆ ಅಧಿಕಾರಕ್ಕೆ ತರುತ್ತೇನೆ ಎಂದು ಯಡಿಯೂರಪ್ಪ ಮತ್ತೊಮ್ಮೆ ಪ್ರತಿಜ್ಞೆ ಮಾಡಿದ್ದಾರೆ.











Click it and Unblock the Notifications