ನಗುವಿನ ಜೊತೆ ಅಧಿಕಾರಿಗಳಿಗೆ ಡಿವಿಎಸ್ ಮಾತಿನ ಚುರುಕು

DVS gets into act
ಬೆಂಗಳೂರು, ಆ. 5 : ಆಡಳಿತದ ಎಲ್ಲಾ ಹಂತಗಳಲ್ಲೂ 15 ದಿನಗಳ ಒಳಗಾಗಿ ಕಡತ ವಿಲೇವಾರಿಯಾಗಬೇಕು ಎಂದು ನೂತನ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಆಜ್ಞೆ ಮಾಡಿದ್ದಾರೆ.

ವಿಧಾನಸೌಧದಲ್ಲಿ ಇಂದು ಏರ್ಪಡಿಸಿದ್ದ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು ಹಾಗೂ ಕಾರ್ಯದರ್ಶಿಗಳ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಇಲಾಖಾ ಅಧಿಕಾರಿಗಳು ತಮ್ಮ ಅಧೀನ ಸಿಬ್ಬಂದಿಗಳಿಗೆ ಈ ಸಂಬಂಧ ಸೂಚನೆ ನೀಡಬೇಕು ಎಂದರು.

ಸದೃಢ ಹಾಗೂ ಸಶಕ್ತ ರಾಜ್ಯ ರೂಪಿಸುವ ದಿಶೆಯಲ್ಲಿ ಕೆಲಸ ಮಾಡುತ್ತೇನೆ ಎಂದ ಅವರು, ನೂರಾರು ಯೋಜನೆಗಳನ್ನು ಘೋಷಣೆ ಮಾಡುವುದಕ್ಕಿಂತ ಹಾಲಿ ಘೋಷಣೆ ಮಾಡಿರುವ ಯೋಜನೆಗಳನ್ನು ಅನುಷ್ಠಾನಗೊಳಿಸುವುದು ಅತಿಮುಖ್ಯ ಎಂದರು.

ಕುಡಿಯುವ ನೀರು, ರಸ್ತೆ ನಿರ್ಮಾಣ, ನೈರ್ಮಲ್ಯ ಕಾಪಾಡುವುದು ವಸತಿ ಗ್ರಾಮೀಣಾಭಿವೃದ್ಧಿ, ಶಿಕ್ಷಣ ಕ್ಷೇತ್ರ ಹಾಗೂ ಜನಸಾಮಾನ್ಯರಿಗೆ ನೀಡುವುದು ಸರ್ಕಾರದ ಆದ್ಯತಾ ಕ್ಷೇತ್ರಗಳಾಗಿವೆ ಎಂದು ವಿವರಿಸಿದರು. ವಾರದಲ್ಲಿ ಮೂರು ದಿನ ಬೆಂಗಳೂರಿನಲ್ಲಿದ್ದು ಕಚೇರಿ ಕೆಲಸ ನಿರ್ವಹಿಸುವುದರ ಜೊತೆಗೆ ಎರಡು ದಿನ ಜಿಲ್ಲಾ ಪ್ರವಾಸ ಕೈಗೊಳ್ಳುವುದಾಗಿ ತಿಳಿಸಿದರು.

ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ಎಸ್.ವಿ. ರಂಗನಾಥ್, ಅಪರ ಮುಖ್ಯ ಕಾರ್ಯದರ್ಶಿಗಳಾದ ಕೆ. ಜೈರಾಜ್, ಮೀರಾ ಸಕ್ಸೇನಾ ಹಾಗೂ ವಿವಿಧ ಇಲಾಖೆಗಳ ಮುಖ್ಯ ಕಾರ್ಯದರ್ಶಿಗಳು, ಕಾರ್ಯದರ್ಶಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

ಸಿದ್ದಗಂಗಾ ಶ್ರೀಗಳ ಆಶೀರ್ವಾದ : ರಾಜ್ಯದ ಅಧಿಕಾರ ವಹಿಸಿಕೊಂಡ ಮೊದಲ ದಿನ ಕುರ್ಚಿಗೆ ಭಕ್ತಿಯಿಂದ ನಮಸ್ಕರಿಸಿ ದಿನದ ಚಟುವಟಿಕೆ ಪ್ರಾರಂಭಿಸಿದರು. ಇದಕ್ಕೂ ಮೊದಲು ತುಮಕೂರಿಗೆ ತೆರಳಿ ಸಿದ್ದಗಂಗಾ ಶ್ರೀಗಳಾದ ಶಿವಕುಮಾರ ಸ್ವಾಮೀಜಿ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು. [ಗ್ಯಾಲರಿ]

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+