ಎಚ್ ಡಿ ಕುಮಾರಸ್ವಾಮಿ ದಂಪತಿಗೆ ಲೋಕಾಯುಕ್ತ ಸಮನ್ಸ್

HDK and Anitha summoned by Lokayukta court
ಬೆಂಗಳೂರು ಆ.8: ಅಧಿಕಾರ ದುರುಪಯೋಗ ಹಾಗೂ ಅವ್ಯವಹಾರದ ಆರೋಪದ ಮೇಲೆ ಕೋರ್ಟ್ ಖುದ್ದು ಹಾಜರಾಗುವಂತೆ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ಹಾಗೂ ಶಾಸಕಿ ಅನಿತಾ ಕುಮಾರಸ್ವಾಮಿ ಅವರಿಗೆ ನ್ಯಾಯಾಧೀಶ ಹಿಪ್ಪರಗಿ ಅವರು ಸಮನ್ಸ್ ಜಾರಿ ಮಾಡಿದ್ದಾರೆ.

ಭೂ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ವಕೀಲ ಸಿರಾಜಿನ್ ಬಾಷಾ ಅವರ ಅರ್ಜಿಯ ವಿಚಾರಣೆ ನಡೆಸಿದ ಲೋಕಾಯುಕ್ತ ವಿಶೇಷ ನ್ಯಾಯಾಲಯ ಈ ಆದೇಶ ನೀಡಿದೆ. ಮಾಜಿ ಸಿಎಂ ಕುಮಾರಸ್ವಾಮಿ ಅಲ್ಲದೆ ಈಗಾಗಲೇ ಆರೋಪ ಹೊತ್ತಿರುವ ಮಾಜಿ ಸಿಎಂ ಯಡಿಯೂರಪ್ಪ ಸೇರಿದಂತೆ ಒಟ್ಟು 13 ಜನರಿಗೆ ಸಮನ್ಸ್ ಜಾರಿ ಮಾಡಲಾಗಿದೆ.

ಜಂತಕಲ್ ಮೈನಿಂಗ್ ಗುತ್ತಿಗೆ ನೀಡುವಲ್ಲಿ ಅಧಿಕಾರ ದುರುಪಯೋಗ ಹಾಗೂ ಜಿ ಕೆಟಗರಿ ನಿವೇಶನ ಹಂಚಿಕೆಯಲ್ಲಿ ಅವ್ಯವಹಾರಕ್ಕೆ ಸಂಬಂಧಿಸಿದಂತೆ ನಡೆಯಲಿರುವ ವಿಚಾರಣೆಯಲ್ಲಿ ಈ ಇಬ್ಬರು ಸೇರಿದಂತೆ ಸಮನ್ಸ್ ಪಡೆದವರೆಲ್ಲರೂ ಆ.27ರಂದು ಖುದ್ದು ನ್ಯಾಯಾಲಯಕ್ಕೆ ಹಾಜರಿರತಕ್ಕದ್ದು ಎಂದು ಕೋರ್ಟ್ ಆದೇಶ ನೀಡಿದೆ.

ವಕೀಲ ಸಿರಾಜಿನ್ ಭಾಷಾ ಹಾಗೂ ಕೆ.ಎನ್ ಬಾಲರಾಜ್ ಅವರು ಬೆಂಗಳೂರಿನ ಲೋಕಾಯುಕ್ತರ ವಿಶೇಷ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ ನಂತರ ಯಡಿಯೂರಪ್ಪ ಅವರ ಮೇಲೆ ಭ್ರಷ್ಟಾಚಾರ ನಿರ್ಮೂಲನೆ ಕಾಯಿದೆ(Prevention of Corruption Act) 1988ರ ಸೆಕ್ಷನ್ 19(1) ಹಾಗೂ Criminal Procedure Code ಸಿಪಿಸಿ 1973ರ ಸೆಕ್ಷನ್ 197ರ ಅನ್ವಯ ಕ್ರಿಮಿನಲ್ ದೂರು ದಾಖಲಿಸಲಾಗಿತ್ತು. ಇದೇ ರೀತಿ ಭೂ ಹಗರಣ ಪ್ರಕರಣದಲ್ಲಿ ಕುಮಾರಸ್ವಾಮಿ ಕುಟುಂಬ ಭಾಗಿ ಆಗಿರುವ ಬಗ್ಗೆ ವಿಚಾರಣೆ ನಡೆದಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+