ಯಡ್ಡಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಶೋಭಾ ಪಟಾಲಂ ಲಾಬಿ

shobha, yadiyurappa
ಬೆಂಗಳೂರು, ಆಗಸ್ಟ್ 10: 'ಮುಖ್ಯಮಂತ್ರಿ ಸ್ಥಾನವನ್ನಂತೂ ಕಿತ್ತುಕೊಂಡಿದ್ದೀರಿ. ಈಗ ರಾಜ್ಯಾಧ್ಯಕ್ಷ ಸ್ಥಾನವನ್ನಾದರೂ ದಯಪಾಲಿಸಿ' ಎಂದು ಶೋಭಾ ಕರಂದ್ಲಾಜೆ ಅವರು ದೆಹಲಿಯಲ್ಲಿ ಬಿಜೆಪಿ ವರಿಷ್ಠರ ಮೇಲೆ ಒತ್ತಡ ಹೇರಿದ್ದಾರೆ.

ಯಡಿಯೂರಪ್ಪ ನಿಷ್ಠರಾದ ಶೋಭಾ ಕರಂದ್ಲಾಜೆ, ಬಸವರಾಜ ಬೊಮ್ಮಾಯಿ, ವಿ. ಸೋಮಣ್ಣ, ಉಮೇಶ್ ಕತ್ತಿ, ಸಿಎಂ ಉದಾಸಿ ಹಾಗೂ ಲಕ್ಷ್ಮಣ ಸವಡಿ ಅವರುಗಳು ಮಂಗಳವಾರ ದೆಹಲಿಗೆ ಆಗಮಿಸಿ ವರಿಷ್ಠರನ್ನು ಭೇಟಿ ಮಾಡಿದ್ದಾರೆ.

ಹೈಕಮಾಂಡ್ ಸೂಚನೆಯಂತೆ ಯಡಿಯೂರಪ್ಪನವರು ಮುಖ್ಯಮಂತ್ರಿ ಸ್ಥಾನ ಬಿಟ್ಟುಕೊಟ್ಟಿದ್ದಾರೆ. ಹೀಗಾಗಿ ಅವರಿಗೆ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಸ್ಥಾನವನ್ನು ನೀಡಬೇಕು, ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಪಕ್ಷದ ಏಳಿಗೆಗೆ ಕಷ್ಟವಾಗುತ್ತದೆ ಎಂದು ಇವರು ವರಿಷ್ಠರಲ್ಲಿ ಮನವಿ ಮಾಡಿದ್ದಾರೆ ಎಂದು ಗೊತ್ತಾಗಿದೆ.

ಅತ್ತ ಇದೇ ಗುಂಗಿನಲ್ಲಿರುವ ಯಡಿಯೂರಪ್ಪ ಅವರು ಶಿವಮೊಗ್ಗದಲ್ಲಿ ಸರಕಾರದ ಮತ್ತು ಮುಖ್ಯವಾಗಿ ಮುಖ್ಯಮಂತ್ರಿ ಡಿವಿಎಸ್ ಅವರ ಸ್ವಯಂ ಪ್ರತಿನಿಧಿಯಾಗಿ ಮಾತನಾಡಿದ್ದಾರೆ. ಇವರಿಗೆ ಸಾಥ್ ನೀಡಲು ಶಿವಮೊಗ್ಗದಲ್ಲಿ ಹಾಜರಿರಬೇಕಿದ್ದರಿಂದ ಯಡಿಯೂರಪ್ಪ ಅವರ ಮಾನಸ ಪುತ್ರ ರೇಣುಕಾಚಾರ್ಯ ಮತ್ತು ನಿರಾಣಿ ಅವರು ಶೋಭಾ ಪಟಾಲಂನಲ್ಲಿ ಕಾಣಿಸಿಕೊಳ್ಳುವಲ್ಲಿ ಸಾಧ್ಯವಾಗಿಲ್ಲ ಎಂದು ಮೂಲಗಳು ತಿಳಿಸಿವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+