ಆ.17ರಂದು ಯಡಿಯೂರಪ್ಪಗೆ ಮತ್ತೊಂದು ಗಂಡಾಂತರ?

ಲೋಕಾಯುಕ್ತ ತನಿಖಾ ತಂಡದ ಮುಖ್ಯಸ್ಥ ಅರಣ್ಯಾಧಿಕಾರಿ ಯು.ವಿ ಸಿಂಗ್ ಅವರಿಗೆ ವರದಿ ಸಲ್ಲಿಸಲು ಕಾಲಾವಕಾಶ ನೀಡುವಂತೆ ಕೋರಿ ಲೋಕಾಯುಕ್ತ ಪರ ವಕೀಲರು ಮನವಿ ಸಲ್ಲಿಸಿದ್ದರು. ಈ ಮನವಿಯನ್ನು ಪುರಸ್ಕರಿಸಿದ ಹೈಕೋರ್ಟ್ ನ್ಯಾಯಪೀಠ ವಿಚಾರಣೆಯನ್ನು ಮುಂದೂಡಿದೆ.
ನ್ಯಾಯಮೂರ್ತಿಗಳಾದ ಖೇಲ್ ಮಂಜುನಾಥ್, ಎಚ್ ಎಸ್ ಕೆಂಪಣ್ಣ ಅವರನ್ನೊಳಗೊಂಡ ವಿಭಾಗೀಯ ಪೀಠ ಈ ಪ್ರಕರಣದ ವಿಚಾರಣೆ ನಡೆಸುತ್ತಿದೆ.
'ಲೋಕಾಯುಕ್ತರ ವರದಿಯಲ್ಲಿ ಅನಾವಶ್ಯಕವಾಗಿ ನನ್ನ ಹೆಸರನ್ನು ಸೇರಿಸಲಾಗಿದೆ. ವರದಿ ಸೋರಿಕೆಯಾಗಿ ಸಂಪೂರ್ಣ ದೋಷಪೂರಿತವಾಗಿದೆ ಹೀಗಾಗಿ ವರದಿಯನ್ನು ಅನೂರ್ಜಿತಗೊಳಿಸಬೇಕು' ಎಂದು ಯಡಿಯೂರಪ್ಪ ಅವರು ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು.
ಈ ಮಧ್ಯೆ ಭೂ ಹಗರಣಕ್ಕೆ ಸಂಬಂಧಿಸಿದಂತೆ ಆ.27ರಂದು ಲೋಕಾಯುಕ್ತ ವಿಶೇಷ ನ್ಯಾಯಾಲಯಕ್ಕೆ ಹಾಜರಾಗುವಂತೆ ಕೋರ್ಟ್ ಸಮನ್ಸ್ ನೀಡಿದೆ. ಭದ್ರಾ ಮೇಲ್ದಂಡೆ ಯೋಜನೆ ಕಿಕ್ ಬ್ಯಾಕ್ ಕೇಸ್ ನಲ್ಲಿ ಯಡಿಯೂರಪ್ಪ ವಿರುದ್ಧ ಎಫ್ ಐಆರ್ ದಾಖಲಿಸಲಾಗಿದೆ.












Click it and Unblock the Notifications