ಮಿಸೆಸ್ ಸುಷ್ಮಾರನ್ನು ಮಿಸ್ ಮಾಡಿಕೊಳ್ಳುತಿದೆ ಬಳ್ಳಾರಿ

1999ರ ಲೋಕಸಭಾ ಚುನಾವಣೆಯಲ್ಲಿ 'ನಾನು ನಿಮ್ಮ ಮನೆಯ ಮಗಳು. ನೀವು ನನಗೆ ಓಟು ಕೊಡಿ - ಬಿಡಿ. ನಾನು ಮನೆ ಮಗಳಾಗಿ ಪ್ರತಿವರ್ಷ ಶ್ರೀವರಮಹಾಲಕ್ಷ್ಮಿ ಪೂಜೆಗೆ ತಪ್ಪದೇ ಬರುತ್ತೇನೆ. ಆಶೀರ್ವದಿಸಿ" ಎಂದಿದ್ದರು. ಜಿಲ್ಲೆಯ ಮತದಾರರು ಸುಷ್ಮಾ ಸ್ವರಾಜ್ ಅವರನ್ನು ಹೃದಯಪೂರ್ವಕವಾಗಿ ಬೆಂಬಲಿಸಿದ್ದರು. ಸುಷ್ಮಾ ಈ ಚುನಾವಣೆಯಲ್ಲಿ ಸೋಲನುಭವಿಸಿದಾಗ ಜಿಲ್ಲೆಯಲ್ಲಿ ಅನಾಥಪ್ರಜ್ಞೆ ಮೂಡಿತ್ತು. ಸುಷ್ಮಾ ಅವರ ಸೋಲನ್ನು ಅರಗಿಸಿಕೊಳ್ಳಲಾಗದ ಅನೇಕರು ಅನ್ನನೀರು ಬಿಟ್ಟರು.
ಜನಾರ್ದನ ರೆಡ್ಡಿ ಅವರು ಪಕ್ಷವನ್ನು ಬೇರುಮಟ್ಟದಲ್ಲಿ ಕಟ್ಟಲು ಸುಷ್ಮಾ ಅವರ ಸೋಲಿನ ಭಾವನಾತ್ಮಕ ಅನುಕಂಪವನ್ನೇ ಬಂಡವಾಳ ಮಾಡಿಕೊಂಡು ಯಶಸ್ಸು ಸಾಧಿಸಿದರು. ಸುಷ್ಮಾ ಅವರ ಸೋಲು ಬಳ್ಳಾರಿಯಲ್ಲಿ ಬಿಜೆಪಿ ಇತಿಹಾಸ ನಿರ್ಮಿಸಲು ಪ್ರೇರಣೆ ನೀಡಿತು. ಬಳ್ಳಾರಿ ನಗರಸಭೆ, ಪಾಲಿಕೆ, ಗ್ರಾಮ, ತಾಲೂಕು - ಜಿಲ್ಲಾ ಪಂಚಾಯಿತಿ ಮತ್ತು ವಿಧಾನಸಭೆ, ಲೋಕಸಭೆಯಲ್ಲಿ ಬಿಜೆಪಿ ಅಭೂತಪೂರ್ವ ಜಯಗಳಿಸಿತು. ಕಾಂಗ್ರೆಸ್ ಪಕ್ಷವನ್ನು ಜಿಲ್ಲೆಯಲ್ಲಿ ನುಚ್ಚುನೂರು ಮಾಡಿ ಇಡೀ ದೇಶದ ರಾಜಕೀಯವೇ ಬಳ್ಳಾರಿಯನ್ನು ನೋಡುವಂತೆ ಆಯಿತು.
ಪ್ರತಿವರ್ಷದ ವರಮಹಾಲಕ್ಷ್ಮಿ ಪೂಜೆಗೆ ಆಗಮಿಸಿ, ಡಾ. ಬಿ.ಕೆ. ಶ್ರೀನಿವಾಸಮೂರ್ತಿ ಅವರ ಮನೆಯಲ್ಲಿ ಪೂಜೆ ಸಲ್ಲಿಸಿ ಜಿಲ್ಲಾ ಬಿಜೆಪಿ, ಬಿ. ಶ್ರೀರಾಮುಲು ನೇತೃತ್ವದಲ್ಲಿ ಏರ್ಪಡಿಸುತ್ತಿದ್ದ ಸಾಮೂಹಿಕ ವಿವಾಹಗಳಲ್ಲಿ ಪಾಲ್ಗೊಂಡು ನವದಂಪತಿಗಳಿಗೆ ಆಶೀರ್ವದಿಸುತ್ತಿದ್ದರು. ಸುಷ್ಮಾ ಸ್ವರಾಜ್ ಅವರು ವರ್ಷಕ್ಕೊಮ್ಮೆ ಬಳ್ಳಾರಿಗೆ ಭೇಟಿ ನೀಡಿ ಕಾರ್ಯಕರ್ತರಲ್ಲಿ ಶಕ್ತಿ, ಸ್ಪೂರ್ತಿ ತುಂಬುತ್ತಿದ್ದರು. ಕೊಟ್ಟ ಮಾತಿಗೆ ತಪ್ಪದೇ ನಡೆಯುತ್ತಿದ್ದರು.
ಸಾಮೂಹಿಕ ವಿವಾಹ : ಗಣಿ ಹಗರಣ ಕುರಿತು ನ್ಯಾಯಮೂರ್ತಿ ಸಂತೋಷ ಹೆಗ್ಡೆ ಅವರು ಸರ್ಕಾರಕ್ಕೆ ವರದಿ ಸಲ್ಲಿಸಿದ ನಂತರ ಸುಷ್ಮಾ ಸ್ವರಾಜ್ ಬಳ್ಳಾರಿಯ ಯಾವ ವಿಚಾರಗಳತ್ತವೂ ಗಮನ ನೀಡುತ್ತಿಲ್ಲ. ಜನಾರ್ದನ ರೆಡ್ಡಿ ಮತ್ತು ಸಹೋದರರ ಪರವಾಗಿ ರಾಜ್ಯ - ರಾಷ್ಟ್ರ ಬಿಜೆಪಿಯಲ್ಲಿ ವಕಾಲತ್ತು ಮಾಡುತ್ತಿದ್ದ ರೆಡ್ಡಿಗಳ 'ಗಾಡ್ ಮದರ್" ಸುಷ್ಮಾ ಅವರು ಶುಕ್ರವಾರ ನಡೆಯಲಿರುವ ಸಾಮೂಹಿತ ವಿವಾಹ ಮಹೋತ್ಸವಕ್ಕೆ ಗೈರಾಗುತ್ತಿದ್ದಾರೆ. ಆದರೆ, ಪಕ್ಷದ ಕಾರ್ಯಕರ್ತರನ್ನು ಪ್ರೋತ್ಸಾಹಿಸಲು ರಾಷ್ಟ್ರಾಧ್ಯಕ್ಷ ನಿತಿನ್ ಗಡ್ಕರಿ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅನಂತ್ ಕುಮಾರ್, ರಾಜ್ಯಾಧ್ಯಕ್ಷ ಕೆ.ಎಸ್. ಈಶ್ವರಪ್ಪ, ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇನ್ನಿತರ ಗಣ್ಯರು ಆಗಮಿಸಲಿದ್ದಾರೆ.
ಬಳ್ಳಾರಿಯ ಬಿಡಿಎಎ ಮೈದಾನದಲ್ಲಿ 300X300 ಅಡಿ ವೇದಿಕೆಯನ್ನು ನಿರ್ಮಿಸಲಾಗಿದೆ. 5000ಕ್ಕೂ ಹೆಚ್ಚಿನ ಕುರ್ಚಿಗಳ ವ್ಯವಸ್ಥೆ ಮಾಡಲಾಗಿದೆ. 250ಕ್ಕೂ ಹೆಚ್ಚಿನ ಜೋಡಿಗಳು ವಿವಾಹವಾಗಲು ಇಚ್ಛಿಸಿ ಹೆಸರು ನೋಂದಾಯಿಸಿದ್ದಾರೆ. ಬಿಡಿಎಎ ಮೈದಾನವನ್ನು ಅದ್ಧೂರಿಯಾಗಿ ಅಲಂಕರಿಸಲಾಗಿದೆ. ನಗರದ ಪ್ರಮುಖ ರಸ್ತೆಗಳಲ್ಲಿ ಆಹ್ವಾನಿತರ ಆಳೆತ್ತರ ಕಟೌಟುಗಳನ್ನು ನಿಲ್ಲಿಸಲಾಗಿದೆ. ಬಿಜೆಪಿಯ ಬಾವುಟಗಳು, ಶ್ರೀರಾಮುಲು ಮತ್ತು ರೆಡ್ಡಿ ಸಹೋದರರು, ಸಂಸದೆ ಜೆ. ಶಾಂತ ಸೇರಿ ಅನೇಕ ಮುಖಂಡರ ಕಟೌಟುಗಳು, ಬ್ಯಾನರ್‌ಗಳು ಅಲಂಕಾರಗೊಂಡಿವೆ. ರಾಜಕೀಯ ಏರುಪೇರುಗಳು ಏನೇ ಆಗಲಿ ನಗರದಲ್ಲಿ ಹಬ್ಬದ ಸಂಭ್ರಮವಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications