ಕನ್ನಡ ಮಳಿಗೆಗಳಿಗೆ ಅನುದಾನ : ಡಾ.ಸಿದ್ಧಲಿಂಗಯ್ಯ

ಶುಕ್ರವಾರ ಬೆಂಗಳೂರು ವಿವಿ ಸೆನೆಟ್ ಹಾಲ್‌ನಲ್ಲಿ ಭಾರತೀಯ ಗ್ರಂಥಾಲಯ ಪಿತಾಮಹ ಶಿಯ್ಯಾಳಿ ರಾಮಾಮೃತ ರಂಗನಾಥನ್ ಅವರ ಜನ್ಮ ದಿನಾಚರಣೆ ಮತ್ತು ಗ್ರಂಥಪಾಲಕರ ದಿನದ ಅಂಗವಾಗಿ ಪ್ರಯುಕ್ತ ಆಯೋಜಿಸಿದ್ದ ಸಮಾರಂಭದಲ್ಲಿ ಅವರು ಮಾತನಾಡಿದರು.
ಕನ್ನಡ ಪುಸ್ತಕ ಪ್ರಕಾಶಕರಿಗೆ ಪ್ರಾಧಿಕಾರವು ವಿಶೇಷ ಸಹಕಾರ ನೀಡುತ್ತಾ ಬಂದಿದೆ. ಅದರಲ್ಲೂ ವಿಶೇಷವಾಗಿ ವಿಶ್ವವಿದ್ಯಾಲಯವು ಬೃಹತ್ ಪುಸ್ತಕೋತ್ಸವ ಆಯೋಜಿಸುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದು ಸಿದ್ದಲಿಂಗಯ್ಯ ನುಡಿದರು.
ಸಮಾರಂಭದ ಅಧ್ಯಕ್ಷತೆಯನ್ನು ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿ ಡಾ. ಎನ್. ಪ್ರಭುದೇವ್ ವಹಿಸಿದ್ದರು. ಸಮಾರಂಭದಲ್ಲಿ ಕರ್ನಾಟಕ ರಾಜ್ಯ ಗ್ರಂಥಾಲಯ ಸಂಘದ ಅಧ್ಯಕ್ಷ ಪಿ.ವೈ ರಾಜೇಂದ್ರಕುಮಾರ್, ಭಾರತೀಯ ಶೈಕ್ಷಣಿಕ ಗ್ರಂಥಾಲಯ ಸಂಘದ ಅಧ್ಯಕ್ಷ ಡಾ.ಪಿ.ವಿ.ಕೊಣ್ಣೂರ ಮತ್ತಿತರರು ಭಾಗವಹಿಸಿದ್ದರು.
ಲೈಬ್ರರಿ ವಾಕ್ : ಇದಕ್ಕೂ ಮೊದಲು ಕಬ್ಬನ್ ಪಾರ್ಕ್‌ನಲ್ಲಿರುವ ರಾಜ್ಯ ಕೇಂದ್ರ ಗ್ರಂಥಾಲಯದಿಂದ ಸೆಂಟ್ರಲ್ ಕಾಲೇಜಿಗೆ 'ಲೈಬ್ರರಿ ವಾಕ್' ನಡೆಯಿತು. ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿ ಡಾ. ಎನ್. ಪ್ರಭುದೇವ್ ಅವರು ನಡಿಗೆಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಗ್ರಂಥಾಲಯ ಸಂಘದ ಅಧ್ಯಕ್ಷ ಪಿ.ವೈ ರಾಜೇಂದ್ರಕುಮಾರ್, ಭಾರತೀಯ ಶೈಕ್ಷಣಿಕ ಗ್ರಂಥಾಲಯ ಸಂಘದ ಅಧ್ಯಕ್ಷ ಡಾ.ಪಿ.ವಿ.ಕೊಣ್ಣೂರ ಮತ್ತಿತರರು ಭಾಗವಹಿಸಿದ್ದರು.












Click it and Unblock the Notifications