ಮತ್ತೊಂದು ಸುತ್ತಿನ ಸಂಪುಟ ವಿಸ್ತರಣೆ : ಡಿವಿ ಸುಳಿವು

DV Sadananda Gowda
ಮಂಗಳೂರು, ಆ.13 : ಬಿಜೆಪಿ ನಾಯಕರು ಮತ್ತು ಕರ್ನಾಟಕದ ಉಸ್ತುವಾರಿ ನೋಡಿಕೊಳ್ಳುತ್ತಿರುವ ಧರ್ಮೇಂದ್ರ ಪ್ರಧಾನ್ ಅವರು ಕೆಲವೇ ದಿನಗಳಲ್ಲಿ ಬೆಂಗಳೂರಿಗೆ ಬಂದು ಸ್ಥಳೀಯ ನಾಯಕರೊಂದಿಗೆ ಚರ್ಚಿಸಿದ ನಂತರ ಸಂಪುಟ ವಿಸ್ತರಣೆ ಮಾಡುವ ಸುಳಿವನ್ನು ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡರು ಧರ್ಮಸ್ಥಳದಲ್ಲಿ ನೀಡಿದರು.

ಅವರು ಶನಿವಾರ ಧರ್ಮಸ್ಥಳಕ್ಕೆ ಆಗಮಿಸಿ ಮಂಜುನಾಥ ಸ್ವಾಮಿಯ ದರ್ಶನ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ ಅಭಿವೃದ್ಧಿ ವಿಚಾರದಲ್ಲಿ ರಾಜಕೀಯ ಇಲ್ಲ. ಇನ್ನೇನಿದ್ದರೂ ಕಾರ್ಯಕ್ರಮಗಳ ಅನುಷ್ಠಾನಕ್ಕೆ ಆದ್ಯತೆ ಎಂದ ಅವರು, ಇನ್ನು ಮೂರು ದಿನಗಳಲ್ಲಿ ಇಲಾಖಾವಾರು ಅಧಿಕಾರಿಗಳ ಸಭೆ ನಡೆಸಿ ಸೂಕ್ತ ಸೂಚನೆ ನೀಡುವುದಾಗಿ ನುಡಿದರು.

ನಗುನಗುತ್ತಲೇ ತಾವು ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಅಧಿಕಾರ ನಿರ್ವಹಿಸುವ ಭರವಸೆ ನೀಡಿದ ಅವರು, ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರೊಂದಿಗೆ ಸಮಾಲೋಚನೆ ನಡೆಸಿದರು. ಮುಖ್ಯಮಂತ್ರಿಗಳೊಂದಿಗೆ ಸಚಿವ ಕೃಷ್ಣ ಪಾಲೇಮಾರ್, ಸಂಸದ ನಳಿನ್ ಕುಮಾರ್ ಕಟೀಲ್ ಸಹಿತ ಪ್ರಮುಖರಿದ್ದರು. ಮುಖ್ಯಮಂತ್ರಿಗಳನ್ನು ಧರ್ಮಸ್ಥಳದ ಡಿ.ಹರ್ಷೇಂದ್ರ ಕುಮಾರ್ ಆತ್ಮೀಯವಾಗಿ ಸ್ವಾಗತಿಸಿದರು. ನಂತರ ಮುಖ್ಯಮಂತ್ರಿಗಳು ಕುಕ್ಕೆ ಸುಬ್ರಹ್ಮಣ್ಯಕ್ಕೆ ತೆರಳಿದರು.

ಮೊದಲ ಸುತ್ತಿನ ಸಂಪುಟ ರಚನೆಯಲ್ಲಿ 21 ಶಾಸಕರು ಪ್ರಮಾಣ ವಚನ ಸ್ವೀಕರಿಸಿದ್ದರು. ಮೊದಲ ಸುತ್ತಿನಲ್ಲಿ ಯಡಿಯೂರಪ್ಪ ಬಣ ಮೇಲುಗೈ ಸಾಧಿಸಿದ್ದರೆ, ಎರಡನೇ ಸುತ್ತಿನ ವಿಸ್ತರಣೆಯಲ್ಲಿ ಈಶ್ವರಪ್ಪ ಬಣದ ಶಾಸಕರಿಗೆ ಸಿಂಹಪಾಲು ದೊರೆತಿತ್ತು. ಮೂರನೇ ಸುತ್ತಿನಲ್ಲಿ ಯಾರ್ಯಾರಿಗೆ ಮಣೆ ಹಾಕಲಿದ್ದಾರೆ ಡಿವಿಎಸ್?

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+