ಕರ್ನಾಟಕವನ್ನು ಮಾದರಿ ರಾಜ್ಯ ಮಾಡುವುದೇ ಗುರಿ

ಪ್ರತಿಪಕ್ಷದವರು, ಪಕ್ಷದವರ ಸಹಿತ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಅಧಿಕಾರ ನಿರ್ವಹಿಸುವುದಾಗಿ ನುಡಿದ ಅವರು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಜಾರಿಗೆ ತಂದಿರುವ ಅಭಿವೃದ್ಧಿ ಕಾರ್ಯಕ್ರಮಗಳು, ಜನಪರ ಯೋಜನೆಗಳನ್ನು ಮುಂದುವರಿಸುವುದಾಗಿ ಹೇಳಿದರು.
ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಮೇಲೆ ಅಧಿಕಾರಿಗಳ ಸಭೆ ನಡೆಸಿ ಆಡಳಿತ ಚುರುಕುಗೊಳಿಸುವಂತೆ ನಿರ್ದೇಶನ ನೀಡಿರುವುದಾಗಿ ಹೇಳಿದ ಅವರು ತಾವು ಚುನಾವಣೆಗೆ ಸ್ಪರ್ಧಿಸುವ ಕುರಿತು ಇನೂ ನಿರ್ಧಾರ ಮಾಡಿಲ್ಲ ಆರು ತಿಂಗಳ ಅವಕಾಶವಿರುವುದರಿಂದ ಏನು ಮಾಡಬೇಕೆಂಬ ಬಗ್ಗೆ ಮತ್ತೆ ನಿರ್ಧರಿಸಲಾಗುವುದು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಮೇಲೆ ಇದೇ ಮೊದಲ ಬಾರಿಗೆ ತವರು ಜಿಲ್ಲೆಗೆ ಸಚಿವ ಜೆ.ಕೃಷ್ಣ ಪಾಲೇಮಾರ್ ಜೊತೆಗೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದ ಡಿ.ವಿ.ಸದಾನಂದ ಗೌಡರನ್ನು ಪಕ್ಷದ ಜಿಲ್ಲಾಧ್ಯಕ್ಷ ಪದ್ಮನಾಭ ಕೊಟ್ಟಾರಿ ಸಹಿತ ಪದಾಧಿಕಾರಿಗಳು, ಮಂಗಳೂರು ಮೇಯರ್ ಪ್ರವೀಣ್ ಸಹಿತ ಅಧಿಕಾರಿಗಳು ಆತ್ಮೀಯವಾಗಿ ಸ್ವಾಗತಿಸಿದರು.












Click it and Unblock the Notifications