ರೆಡ್ಡಿ ಸೋದರರಿಗೆ ಸಚಿವ ಸಂಪುಟದಲ್ಲಿ ಸ್ಥಾನ : ಈಶ್ವರಪ್ಪ
ಶಿವಮೊಗ್ಗ,
ಆ,14: ಮುಖ್ಯಮಂತ್ರಿ ಡಿವಿ ಸದಾನಂದ ಗೌಡರ ಸಚಿವ ಸಂಪುಟದ ಮುಂದಿನ ವಿಸ್ತರಣೆಯಲ್ಲಿ ರೆಡ್ಡಿ ಸೋದರರಿಗೆ ಸ್ಥಾನ ನೀಡುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಕೆಎಸ್ ಈಶ್ವರಪ್ಪ ಹೇಳಿದ್ದಾರೆ. id="toptextpromo">ಬಾಕಿ
ಉಳಿದಿರುವ 7 ಸ್ಥಾನಗಳ ಪೈಕಿ 3 ಸ್ಥಾನಗಳು ರೆಡ್ಡಿಗಳ ಪಾಲಾಗಲಿದೆ. ಕರುಣಾಕರ ರೆಡ್ಡಿ, ಸೋಮಶೇಖರ ರೆಡ್ಡಿ ಹಾಗೂ ಶ್ರೀರಾಮುಲು ಅವರು ಕ್ಯಾಬಿನೆಟ್ ಸೇರಲಿದ್ದಾರೆ. ಒಟ್ಟು ಐದು ಸ್ಥಾನಗಳನ್ನು ತುಂಬಲಾಗುವುದು ಮಿಕ್ಕ ಸ್ಥಾನಗಳನ್ನು ಸದ್ಯಕ್ಕೆ ಹಾಗೆ ಉಳಿಸಿಕೊಳ್ಳಲಾಗುವುದು ಎಂದು ಈಶ್ವರಪ್ಪ ಹೇಳಿದರು. id='are-slot-1' class='oiad oi-axt oiadv'> id='top-searched-articles'>ಲೋಕಾಯುಕ್ತ
ವರದಿಯ ಬಗ್ಗೆ ಹಿರಿಯ ಕಾನೂನು ತಜ್ಞರಿಂದ ಅಭಿಪ್ರಾಯ ಸಂಗ್ರಹಿಸಲಾಗುವುದು. ರೆಡ್ಡಿ ಸೋದರರ ಮೇಲೆ ಭ್ರಷ್ಟಾಚಾರದ ಆರೋಪವಿಲ್ಲ. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ತಮ್ಮ ಮೇಲಿರುವ ಆರೋಪಗಳನ್ನು ಸಮರ್ಥವಾಗಿ ಎದುರಿಸಿ ಪರಿಶುದ್ಧರಾಗಿ ಹೊರಬರಲಿದ್ದಾರೆ. ಅವರಿಗೆ ಉನ್ನತ ಸ್ಥಾನವನ್ನು ಕಲ್ಪಿಸುವ ಬಗ್ಗೆ ಈಗಾಗಲೇ ಹೈಕಮಾಂಡ್ ಚರ್ಚಿಸುತ್ತಿದೆ ಎಂದು ಈಶ್ವರಪ್ಪ ತಿಳಿಸಿದರು.











Click it and Unblock the Notifications