ಮುನಿಯಪ್ಪ ಹೇಳ್ತಿದ್ದಾರೆ ಲೆವೆಲ್ ಕ್ರಾಸಿಂಗ್ ತೆಗೆದು ಹಾಕ್ತಾರಂತೆ

ಇಲ್ಲಿನ ದಂಡು ರೈಲು ನಿಲ್ದಾಣದಲ್ಲಿ ಶನಿವಾರ ಪ್ರಯಾಣಿಕರ ವಿಶ್ರಾಂತಿ ಕೊಠಡಿಗಳನ್ನು ಉದ್ಘಾಟಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಅಂಡರ್ ಪಾಸ್ ಅಥವಾ ಮೇಲ್ಸೇತುವೆಗಳನ್ನು ನಿರ್ಮಿಸುವ ಮೂಲಕ ರೈಲ್ವೆ ಲೆವೆಲ್ ಕ್ರಾಸಿಂಗ್‌ಗಳನ್ನು ತೆಗೆದುಹಾಕುತ್ತೇವೆ. ಇದರಿಂದ ಲೆವೆಲ್ ಕ್ರಾಸಿಂಗ್‌ಗಳಲ್ಲಿ ಸಂಭವಿಸುತ್ತಿರುವ ಅಪಘಾತಗಳಿಗೆ ಕಡಿವಾಣ ಬೀಳಲಿದೆ' ಎಂದರು.
ದೇಶದ 32,500 ರೈಲ್ವೆ ಲೆವೆಲ್ ಕ್ರಾಸಿಂಗ್‌ಗಳ ಪೈಕಿ 15 ಸಾವಿರ ಲೆವೆಲ್ ಕ್ರಾಸಿಂಗ್‌ಗಳಲ್ಲಿ ಅಂಡರ್ ಪಾಸ್ ಅಥವಾ ಮೇಲ್ಸೇತುವೆಗಳನ್ನು ನಿರ್ಮಿಸಲಾಗಿದೆ. ಇನ್ನುಳಿದ 17,500 ಲೆವೆಲ್ ಕ್ರಾಸಿಂಗ್‌ಗಳಲ್ಲಿ ಅಂಡರ್ ಪಾಸ್ ಅಥವಾ ಮೇಲ್ಸೇತುವೆ ನಿರ್ಮಾಣ ಕಾರ್ಯ 2015ರ ಒಳಗೆ ಪೂರ್ಣಗೊಳ್ಳಲಿದೆ ಎಂದು ತಿಳಿಸಿದರು.
ಬೆಂಗಳೂರು ರೈಲ್ವೆ ವಿಭಾಗದಲ್ಲಿ ಸುಮಾರು 450 ಲೆವೆಲ್ ಕ್ರಾಸಿಂಗ್‌ಗಳಿವೆ. ಇವುಗಳ ಪೈಕಿ 30 ಲೆವೆಲ್ ಕ್ರಾಸಿಂಗ್‌ಗಳಲ್ಲಿ ಪ್ರಸಕ್ತ ಆರ್ಥಿಕ ವರ್ಷದ ಅಂತ್ಯದೊಳಗೆ ಪರ್ಯಾಯ ಮಾರ್ಗ ನಿರ್ಮಿಸಲಾಗುವುದು ಎಂದು ಮಾಹಿತಿ ನೀಡಿದರು. 'ರಾಜ್ಯದ ರೈಲು ಯೋಜನೆಗಳ ಬಗ್ಗೆ ಸಾಕಷ್ಟು ಗಮನಹರಿಸಿದ್ದೇನೆ. ಇದೇ 22ರಂದು ರಾಜ್ಯದ ಅಧಿಕಾರಿಗಳು ಮತ್ತು ಸಚಿವರೊಂದಿಗೆ ಸಭೆ ನಡೆಸಿ ಇಲ್ಲಿನ ರೈಲು ಯೋಜನೆಗಳು ತ್ವರಿತಗತಿಯಲ್ಲಿ ಪೂರ್ಣಗೊಳ್ಳುವಂತೆ ಕ್ರಮ ಕೈಗೊಳ್ಳುತ್ತೇನೆ' ಎಂದು ಇದೇ ಸಂದರ್ಭದಲ್ಲಿ ಅವರು ಹೇಳಿದರು.












Click it and Unblock the Notifications