ಠಾಣೆ ಮೆಟ್ಟಿಲೇರಿದ ರಾಷ್ಟ್ರಧ್ವಜ ಅವಮಾನ ಪ್ರಕರಣ

H VIshwanath showing the pamphlet
ಮೈಸೂರು, ಆ. 16 : ಮೈಸೂರಿನ ಚಾಮುಂಡಿವಿಹಾರ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಉಸ್ತುವಾರಿ ಸಚಿವ ಎಸ್.ಎ.ರಾಮದಾಸ್ ಕಚೇರಿಯಿಂದ ಪ್ರಕಟಿಸಲಾದ ಕರಪತ್ರದಲ್ಲಿ ರಾಷ್ಟ್ರಧ್ವಜ ಲಾಂಛನದ ಮೇಲೆ ಸದಾನಂದ ಗೌಡ ಅವರ ಭಾವಚಿತ್ರವನ್ನು ಪ್ರಕಟಿಸಿದ ಪ್ರಕರಣ ಹೊಸ ತಿರುವು ಪಡೆದಿದ್ದು, ಪೊಲೀಸ್ ಠಾಣೆಯ ಮೆಟ್ಟಿಲೇರಿದೆ.

ಸೋಮವಾರ ನಡೆದ ಕಾರ್ಯಕ್ರಮದಲ್ಲಿ ಪಾಲ್ಗೊಂಡವರಿಗೆ ಹಂಚಲಾದ "ಸ್ವಾತಂತ್ರ್ಯೋತ್ಸವದ ಸಂದೇಶ" ಎಂಬ ಕರಪತ್ರದ ಮೇಲ್ಭಾಗದಲ್ಲಿ ಮುಖ್ಯಮಂತ್ರಿ ಡಿವಿ ಸದಾನಂದ ಗೌಡರ ಭಾವಚಿತ್ರ ಹಾಗೂ ಕೆಳಭಾಗದಲ್ಲಿ ರಾಷ್ಟ್ರಧ್ವಜ ಮತ್ತು ಕೆಲವು ಸ್ವಾತಂತ್ರ್ಯ ಹೋರಾಟಗಾರರ ಭಾವಚಿತ್ರವನ್ನು ಪ್ರಕಟಿಸಲಾಗಿತ್ತು.

ಇದು ಸಂಸದ ಎಚ್.ವಿಶ್ವನಾಥ್ ಅವರ ಅಸಮಾಧಾನಕ್ಕೆ ಕಾರಣವಾಯಿತಲ್ಲದೆ, ರಾಷ್ಟ್ರಧ್ವಜಕ್ಕೆ ಅವಮಾನ ಮಾಡಲಾಗಿದೆ ಎಂದು ಸ್ಥಳದಲ್ಲಿಯೇ ಕರಪತ್ರವನ್ನು ಹರಿದು ಹಾಕಿ ಪ್ರತಿಭಟನೆಯನ್ನು ಕೂಡ ನಡೆಸಿದ್ದರು. ಆ ನಂತರ ಸಚಿವ ರಾಮ್‌ದಾಸ್ ಅವರು ತಮ್ಮಿಂದಾದ ಆಚಾತುರ್ಯಕ್ಕೆ ಕ್ಷಮೆ ಕೇಳಿ ಇಡೀ ಪ್ರಕರಣಕ್ಕೆ ತೆರೆ ಎಳೆಯುವ ಪ್ರಯತ್ನ ಮಾಡಿದ್ದರು.

ಆದರೆ ಕಾಂಗ್ರೆಸ್ ಮಾತ್ರ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದವರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಪಟ್ಟು ಹಿಡಿದಿದೆ. ಈ ಸಂಬಂಧ ನಜರ್‌ಬಾದ್ ಠಾಣೆಗೆ ತೆರಳಿ ರಾಮ್‌ದಾಸ್ ವಿರುದ್ಧ ರಾಷ್ಟ್ರಧ್ವಜಕ್ಕೆ ಅವಮಾನ ಎಸಗಿದ ಬಗ್ಗೆ ದೂರು ನೀಡಿದ್ದಾರೆ.

ಇದಕ್ಕೆ ಪ್ರತಿಯಾಗಿ ಬಿಜೆಪಿ ಕೂಡ ಪೊಲೀಸ್ ಠಾಣೆಗೆ ತೆರಳಿ ಶಾಸಕ ತನ್ವೀರ್ ಶೇಟ್ ಹಾಗೂ ವಿಶ್ವನಾಥ್‌ರವರು ರಾಷ್ಟ್ರಧ್ವಜ ಮುದ್ರಿತವಾಗಿದ್ದ ಕರಪತ್ರವನ್ನು ಹರಿದುಹಾಕಿ ಅವಮಾನ ಮಾಡಿದ್ದಾರೆ ಎಂದು ಪ್ರತಿ ದೂರು ನೀಡಿದ್ದಾರೆ. ಆ ಮೂಲಕ ಎರಡು ಪಕ್ಷಗಳ ನಾಯಕರು ಹಗ್ಗಜಗ್ಗಾಟಕ್ಕಿಳಿದಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+