ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಶಾಂತಂಪಾಪಂ : ಮಂಜುನಾಥನ ಕ್ಷಮೆ ಯಾಚಿಸಿದ ಯಡಿಯೂರಪ್ಪ

By * ಚಿದಂಬರ ಬೈಕಂಪಾಡಿ, ಮಂಗಳೂರು
|
Google Oneindia Kannada News

BSY apologizes to Manjunatha
ಮಂಗಳೂರು, ಆ. 16 : ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸೋಮವಾರ ಧರ್ಮಸ್ಥಳಕ್ಕೆ ಆಗಮಿಸಿ ದೇವರ ದರ್ಶನ ಮಾಡುವ ಮೂಲಕ ಮಂಜುನಾಥ ಸ್ವಾಮಿಯ ಮುಂದೆ ಕ್ಷಮೆ ಯಾಚಿಸಿದ್ದಾರೆ. ಆಣೆ-ಪ್ರಮಾಣದಿಂದ ಕುತೂಹಲ ಕೆರಳಿಸಿದ್ದ ಯಡಿಯೂರಪ್ಪ ಮತ್ತು ಎಚ್.ಡಿ.ಕುಮಾರ ಸ್ವಾಮಿ ನಡುವಣ ಕದನ ತಣಿದು ಇದೀಗ ಅಧಿಕಾರ ಕಳೆದುಕೊಂಡಿದ್ದಾರೆ.

ನಾಡಿನಾದ್ಯಂತ ಸಂಚರಿಸಿ ಪಕ್ಷ ಕಟ್ಟುವ ಕಾಯಕದಲ್ಲಿ ತೊಡಗಿಸಿಕೊಳ್ಳಲು ಮಂಜುನಾಥ ಸ್ವಾಮಿಯ ಆಶೀರ್ವಾದ ಬೇಡಿದ್ದಾಗಿ ಯಡಿಯೂರಪ್ಪ ಮಾಧ್ಯಮದವರ ಮುಂದೆ ಹೇಳಿಕೊಂಡರು. ದೇವರ ಕ್ಷಮೆ ಕೇಳುವುದರಲ್ಲಿ ತಪ್ಪಿಲ್ಲ ಎನ್ನುವ ಮೂಲಕ ಯಡಿಯೂರಪ್ಪ ಮತ್ತಷ್ಟು ವಿವರ ಕೊಡಲು ನಿರಾಕರಿಸಿದರು.

ಯಡಿಯೂರಪ್ಪ ಮಾಜಿಯಾದರೂ ಹಾಲಿಯವರಂತೆಯೇ ಅದ್ದೂರಿ ಸ್ವಾಗತ ಪಡೆದರು. ಸಚಿವ ಬಸವರಾಜ್ ಬೊಮ್ಮಾಯಿ, ಉಪಸಭಾಪತಿ ಎನ್.ಯೋಗೀಶ್ ಭಟ್, ಸಚೇತಕ ಜೀವರಾಜ್, ಸಂಸದ ನಳಿನ್ ಕುಮಾರ್ ಕಟೀಲ್, ಕ್ಯಾ.ಗಣೇಶ್ ಕಾರ್ಣಿಕ್, ಮಾಜಿ ಸಚಿವ ನಾಗರಾಜ್ ಶೆಟ್ಟಿ, ಬಿಜೆಪಿ ಜಿಲ್ಲಾಧ್ಯಕ್ಷ ಪದ್ಮನಾಭ್ ಕೊಟ್ಟಾರಿ ಮತ್ತಿತರ ಮುಖಂಡರು ಯಡಿಯೂರಪ್ಪ ಅವರನ್ನು ಬರಮಾಡಿಕೊಂಡರು.

ಯಡಿಯೂರಪ್ಪ ಅವರು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರೊಂದಿಗೆ ಮಾತುಕತೆ ನಡೆಸಿದರು.

English summary
Former chief minister of Karnataka apologizes and seeks blessings of Lord Manjunatha in Dharmasthala. After the truth test drama in Dharmasthala, incidentally BSY had lost his position as CM and also his name appeared in illegal mining.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X