ಬಂಗಾರಪ್ಪನವರ ಆಪ್ತ ಮುಂಡ್ಲೂರು ರಾಮಪ್ಪ ನಿಧನ

ಮೃತರು ಪತ್ನಿ, ಇಬ್ಬರು ಪುತ್ರರು, ಓರ್ವ ಪುತ್ರಿ ಮತ್ತು ಅಪಾರ ಬಂಧುವರ್ಗ, ಮಿತ್ರರು, ಆಪ್ತರು ಮತ್ತು ಅಭಿಮಾನಿಗಳನ್ನು ಅಗಲಿದ್ದಾರೆ. ಎಂ. ರಾಮಪ್ಪ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೊಣಕಾಲು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು ಚೇತರಿಸಿಕೊಳ್ಳದೆ ಅಸುನೀಗಿದರು.
ಮೃತರು ಬಳ್ಳಾರಿ ನಗರಸಭೆ ಸದಸ್ಯರಾಗಿ ರಾಜಕೀಯ ಜೀವನಕ್ಕೆ ಕಾಲಿಟ್ಟು ಎಸ್. ಬಂಗಾರಪ್ಪ ಅವರ ಸಚಿವ ಸಂಪುಟದಲ್ಲಿ ಇಂಧನ ಖಾತೆ ಸಚಿವರಾಗಿದ್ದರು. 1978ರಲ್ಲಿ ಶಾಸಕರಾಗಿದ್ದರು. 2 ಅವಧಿಗೆ ಕುರುಗೋಡು ವಿಧಾನಸಭಾ ಕ್ಷೇತ್ರದಿಂದ, 2 ಅವಧಿಗೆ ಬಳ್ಳಾರಿ ವಿಧಾನಸಭಾ ಕ್ಷೇತ್ರದಿಂದ ಸದಸ್ಯರಾಗಿ ಆಯ್ಕೆ ಆಗಿದ್ದರು.
ರಾಮಕೃಷ್ಣ ಹೆಗಡೆ ಅವರ ಜೊತೆ ಗುರುತಿಸಿಕೊಂಡು ಜನತಾದಳದ ಚಕ್ರದ ಚಿಹ್ನೆಯಿಂದ ಸ್ಪರ್ಧಿಸಿ, ಗೆಲುವು ಸಾಧಿಸಿದ್ದರು. ನಂತರದ ದಿನಗಳಲ್ಲಿ ಕಾಂಗ್ರೆಸ್ ಸೇರಿ ಎಸ್. ಬಂಗಾರಪ್ಪ ಅವರ ಆಪ್ತಬಳಗದಲ್ಲಿ ಗುರುತಿಸಿಕೊಂಡಿದ್ದರು.
ಶೋಕ ಸಂತಾಪ : ಮೃತರ ಆತ್ಮಕ್ಕೆ ಶಾಂತಿ ಕೋರಿ ಮಾಜಿ ಸಂಸದರಾದ ಕೋಳೂರು ಬಸವನಗೌಡ, ಎನ್.ವೈ. ಹನುಮಂತಪ್ಪ, ಮಾಜಿ ಸಚಿವ ಎಂ. ದಿವಾಕರಬಾಬು, ಮಾಜಿ ಶಾಸಕರಾದ ಎಂ. ಶಂಕರರೆಡ್ಡಿ, ಕೆಪಿಸಿಸಿ ಮಾಜಿ ಅಧ್ಯಕ್ಷ ಅಲ್ಲಂ ವೀರಭದ್ರಪ್ಪ, ವಿಧಾನಪರಿಷತ್ ಸದಸ್ಯ ಕೆ.ಸಿ. ಕೊಂಡಯ್ಯ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಪಿ. ರವೀಂದ್ರ, ಹಿರಿಯ ಕಾಂಗ್ರೆಸ್ಸಿಗ ಎಚ್.ಎಂ. ಸುಧಾಕರ್, ವಿಧಾನಪರಿಷತ್ ಮಾಜಿ ಸದಸ್ಯ ಕೆ. ನಿರಂಜನನಾಯ್ಡು, ಜಿಲ್ಲಾ ಜೆಡಿಎಸ್ ಅಧ್ಯಕ್ಷ, ಮಾಜಿ ಶಾಸಕ ಎನ್. ಸೂರ್ಯನಾರಾಯಣರೆಡ್ಡಿ ಸೇರಿ ಅನೇಕರು ಮೃತರ ಅಂತಿಮದರ್ಶನ ಪಡೆದು, ಶೋಕ ವ್ಯಕ್ತಪಡಿಸಿದ್ದಾರೆ.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications