ಪತ್ರಕರ್ತರಿಗೆ 'ಗಣಿ ಕಾಣಿಕೆ' ಸಂದಾಯ ಕಳವಳಕಾರಿ: ಡಾ. ಜಿಪಿ
ಬೆಂಗಳೂರು,
ಆಗಸ್ಟ್ 21: 'ಪತ್ರಕರ್ತರನ್ನು ಸಮಾಜದ ಪ್ರತಿನಿಧಿಗಳನ್ನಾಗಿ ಗುರುತಿಸಲಾಗುತ್ತಿದೆ. ಇಂತಹ ಸಂದರ್ಭದಲ್ಲಿ ಅವರೇ ಭ್ರಷ್ಟಾಚಾರ ಪ್ರಕರಣಗಳಲ್ಲಿ ಭಾಗಿಯಾಗಿರುವುದು ಬೆಳಕಿಗೆ ಬರುತ್ತಿರುವುದು ನಿಜಕ್ಕೂ ಕಳವಳಕಾರಿಯಾದ ಸಂಗತಿ' ಎಂದು ಕೆಪಿಸಿಸಿ ಅಧ್ಯಕ್ಷ ಡಾ. ಜಿ ಪರಮೇಶ್ವರ್ ತಿಳಿಸಿದ್ದಾರೆ. id="toptextpromo">ಅರಮನೆಯ
ದರ್ಬಾರ್ ಹಾಲ್‌ನಲ್ಲಿ ಶನಿವಾರ ಆಯೋಜಿಸಲಾಗಿದ್ದ ಕೆಪಿಸಿಸಿ ಕಾರ್ಯಕಾರಿಣಿ ಸದಸ್ಯರ ಸಭೆಯ ನಂತರ ಸುದ್ದಿಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡುತ್ತಿದ್ದರು. id='are-slot-1' class='oiad oi-axt oiadv'> id='top-searched-articles'>ಗಣಿ
ಅಕ್ರಮ ವರದಿ ಮಾಡದಂತೆ ಪತ್ರಕರ್ತರಿಗೆ ಭಾರಿ ಪ್ರಮಾಣದ ಹಣ ಸಂದಾಯವಾಗಿರುವ ಕುರಿತು ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಈ ಸಂಬಂಧ ಆಯಾ ಮಾಧ್ಯಮ ಸಂಸ್ಥೆಗಳ ಮುಖ್ಯಸ್ಥರು, ಸಂಪಾದಕರು ಅಥವಾ ಸಕ್ಷಮ ಅಧಿಕಾರಿಗಳು ಕ್ರಮ ಜರುಗಿಸುವುದು ಸೂಕ್ತ ಎಂದು ಅಇಪ್ರಾಯಪಟ್ಟರು.











Click it and Unblock the Notifications