ಮೊಸರು ಕುಡಿಕೆ ಉತ್ಸವಕ್ಕೆ ಶಿವಮಣಿ ಡ್ರಮ್ ಮೆರಗು

ಉಡುಪಿಯಲ್ಲಿ ಶಿವಮಣಿ : ಈ ಬಾರಿ ಸಾರ್ವಜನಿಕರಿಗೆ ಉಂಡೆ ಚಕ್ಕುಲಿಯ ಬದಲು ಬಾಳೆಹಣ್ಣುಗಳನ್ನು ವಿತರಿಸಲಾಯಿತು. ನಾಣ್ಯ, ನೋಟು ಹಾಗೂ ಟೋಪಿಗಳನ್ನು ನೆರೆದಿದ್ದ ಭಕ್ತರಿಗೆ ವಿತರಿಸಿದ್ದು ವಿಶೇಷ. ಖ್ಯಾತ ಡ್ರಮ್ ವಾದಕ ಶಿವಮಣಿ ಇದೇ ಮೊದಲ ಬಾರಿಗೆ ಉಡುಪಿ ವಿಟ್ಲಪಿಂಡಿ ಉತ್ಸವದಲ್ಲಿ ಡ್ರಮ್ ವಾದನ ಸೇವೆ ಸಲ್ಲಿಸುವ ಮೂಲಕ ಗಮನ ಸೆಳೆದರು. ಶಿವಮಣಿ ಅವರಿಗೆ ಲಕ್ಷ್ಮೀವರ ತೀರ್ಥರು 108 ಗ್ರಾಂ ತೂಕದ ಚಿನ್ನದ ಸರ ನೀಡಿ ಗೌರವಿಸಿದರು.
ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು ಸೇರಿದಂತೆ ಕರಾವಳಿಯಲ್ಲಿ ಅಟ್ಟೆ ಮಡಿಕೆ ಒಡೆಯುವುದು, ಉದ್ದಕಂಬ ಏರುವುದು, ವಿವಿಧ ಆಟೋಟ ಸ್ಪರ್ಧೆಗಳು, ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಿದವು. ಮಂಗಳೂರಿನ ಕದ್ರಿ, ಅತ್ತಾವರ, ತೊಕ್ಕೂಟ್ಟು, ಕಾವೂರು, ಉರ್ವಾದಲ್ಲಿ ಮೊಸರು ಕುಡಿಕೆ ಉತ್ಸವ ವಿಜೃಂಭಣೆಯಿಂದ ಜರಗಿತು. ಶ್ರೀಕೃಷ್ಣ ದೇವರ ಭಾವಚಿತ್ರ, ವಿಗ್ರಹದ ಭವ್ಯ ಶೋಭಾಯಾತ್ರೆಯಲ್ಲಿ ಸಹಸ್ರಾರು ಮಂದಿ ಭಾಗವಹಿಸಿದರು. ವೈವಿಧ್ಯಮಯ, ಆಕರ್ಷಕ ಟ್ಯಾಬ್ಲೋಗಳು, ಹುಲಿ ವೇಷ ಸೇರಿದಂತೆ ವಿವಿಧ ವೇಷಗಳು ಶೋಭಾಯಾತ್ರೆಗೆ ಮೆರಗು ನೀಡಿದವು.
ಕುಳಾಯಿ, ಕಾವೂರು, ಕಾಟಿಪಳ್ಳ, ಚಿತ್ರಾಪುರ, ಪಾವಂಜೆ, ಕಿನ್ನಿಗೋಳಿ, ಅತ್ತೂರು- ಕಾಫಿಕಾಡ್, ಮಳಲಿ, ಮೂಲ್ಕಿ, ಗಂಜಿಮಠ, ಗುರುಪುರ, ಸುಂಕದಕಟ್ಟೆ ಸೇರಿದಂತೆ ತಾಲೂಕಿನ ವಿವಿಧೆಡೆಗಳಲ್ಲಿ ಮೊಸರುಕುಡಿಕೆ ಉತ್ಸವ ಅದ್ದೂರಿಯಿಂದ ಜರಗಿತು. ಪುತ್ತೂರು, ಬಂಟ್ವಾಳ, ಬೆಳ್ತಂಗಡಿ ತಾಲೂಕಿನಲ್ಲೂ ಅಲ್ಲಲ್ಲಿ ಮೊಸರುಕುಡಿಕೆ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ನಡೆಯಿತು.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications