ಲೋಕಾಯುಕ್ತರಿಂದ ಸಾರ್ವಜನಿಕವಾಗಿ ದೂರು ಸ್ವೀಕಾರ

ಸ್ಥಳದಲ್ಲಿಯೇ ಇತ್ಯರ್ಥಪಡಿಸಬಹುದಾದ ದೂರುಗಳನ್ನು ಅಲ್ಲಿಯೇ ಇತ್ಯರ್ಥ ಪಡಿಸಲಾಗುವುದು. ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬಹುದಾಗಿದೆ. ಅನಾಮಧೇಯ ಅರ್ಜಿಗಳು ಬಂದಲ್ಲಿ ಯಾವುದೇ ಕ್ರಮ ಕೈಗೊಳ್ಳಲಾಗುವುದಿಲ್ಲ.
ಇಂದು (ಆಗಸ್ಟ್ 23) ಪೂರ್ವಾಹ್ನ 11ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಸುಳ್ಯ ಸರಕಾರಿ ಅತಿಥಿ ಗೃಹದಲ್ಲಿ, ಅದೇ ದಿನ ಅಪರಾಹ್ನ 3ರಿಂದ ಸಂಜೆ 4.30ರವರೆಗೆ ಸರಕಾರಿ ಅತಿಥಿ ಗೃಹ ಪುತ್ತೂರಿನಲ್ಲಿ, ಆ.25ರಂದು ಬೆಳ್ತಂಗಡಿ ತಾಲೂಕಿನ ಸರಕಾರಿ ಅತಿಥಿ ಗೃಹದಲ್ಲಿ, ಅದೇ ದಿನ ಅಪರಾಹ್ನ 2.30 ರಿಂದ ಸಂಜೆ 4.30 ಗಂಟೆಯವರೆಗೆ ಬಂಟ್ವಾಳ ತಾಲೂಕು ಸರಕಾರಿ ಅತಿಥಿ ಗೃಹದಲ್ಲಿ, ಆ.27ರಂದು ಪೂ.11ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಮಂಗಳೂರು ತಾಲೂಕಿನ ಮುಚ್ಚೂರು ಗ್ರಾಪಂ ಕಚೇರಿಯಲ್ಲಿ ದೂರುಗಳನ್ನು ಸಲ್ಲಿಸಬಹುದಾಗಿದೆ.
ಅರ್ಜಿದಾರರು ನಮೂನೆ 1 ಮತ್ತು 2ರಲ್ಲಿ ಭರ್ತಿ ಮಾಡಿ ನೋಟರಿಯಿಂದ ಅಫಿಡವಿತ್ ಮಾಡಿಸಿ ಅರ್ಜಿಗಳನ್ನು ಮಂಗಳೂರು ಲೋಕಾಯುಕ್ತ ಕಚೇರಿಗೆ ಅಥವಾ ಬೆಂಗಳೂರು ಡಾ.ಬಿ.ಆರ್. ಅಂಬೇಡ್ಕರ್ ವೀಧಿ, ಬಹುಮಹಡಿ ಕಟ್ಟಡದಲ್ಲಿರುವ ಕರ್ನಾಟಕ ಲೋಕಾಯುಕ್ತ ನಿಬಂಧಕರ ಕಚೇರಿಗೆ ಸಲ್ಲಿಸಬಹುದಾಗಿದೆ.
ಉಳಿದ ದಿನಗಳಲ್ಲೂ ಕಚೇರಿ ವೇಳೆಯಲ್ಲಿ ಸಾರ್ವಜನಿಕರು ಅಹವಾಲು/ದೂರುಗಳನ್ನು ನೀಡಬಹುದಾಗಿದೆ. ದೂರವಾಣಿ ಸಂಖ್ಯೆ ಪೊಲೀಸ್ ಅಧೀಕ್ಷಕರ ಕಚೇರಿ 0824-2429197, ಪೊಲೀಸ್ ಉಪಾಧೀಕ್ಷಕರ ಕಚೇರಿ 0824-2443420 ಪೊಲೀಸ್ ನಿರೀಕ್ಷಕರ ಕಚೇರಿ 0824-2427237 ಮೂಲಕವೂ ಸಂಪರ್ಕಿಸಿ ದೂರು ಸಲ್ಲಿಸಬಹುದಾಗಿದೆ ಎಂದು ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧೀಕ್ಷಕರು ತಿಳಿಸಿದ್ದಾರೆ












Click it and Unblock the Notifications