ದಲಿತರ ಮೇಲೆ ದೌರ್ಜನ್ಯ ಸಲ್ಲದು: ಸದಾನಂದಗೌಡ
ಬೆಂಗಳೂರು,
ಆ. 25: ರಾಜ್ಯದ ಯಾವುದೇ ಭಾಗದಲ್ಲಿ ದಲಿತರ ಮೇಲೆ ನಡೆಯುವ ದೌರ್ಜನ್ಯವನ್ನು ಸರ್ಕಾರ ಸಹಿಸುವುದಿಲ್ಲ ಎಂದು ಮುಖ್ಯಮಂತ್ರಿ ಸದಾನಂದಗೌಡ ಇಂದು ಬೆಂಗಳೂರಿನಲ್ಲಿ ಅವರನ್ನು ಭೇಟಿಯಾದ ಗುಲ್ಬರ್ಗಾದ ದಲಿತ ಸಮನ್ವಯ ಸಮಿತಿ ನಿಯೋಗಕ್ಕೆ ತಿಳಿಸಿದರು. id="toptextpromo">ಕಳೆದ
20 ದಿನಗಳಲ್ಲಿ 10ಕ್ಕೂ ಹೆಚ್ಚು ವಿವಿಧ ದಲಿತ ಸಂಘಟನೆಗಳು ರಾಜ್ಯದ ವಿವಿಧ ಭಾಗಗಳಲ್ಲಿ ದಲಿತರ ಮೇಲೆ ದೌರ್ಜನ್ಯ ನಡೆಯುತ್ತಿದೆ ಎಂದು ದೂರು ನೀಡಿವೆ. ಈ ಬಗ್ಗೆ ಎಲ್ಲಾ ಜಿಲ್ಲಾಧಿಕಾರಿಗಳಿಂದ ಮಾಹಿತಿ ಪಡೆದು ಪರಿಶೀಲನೆ ನಡೆಸಿ ತಪ್ಪಿತಸ್ಥರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು. id='are-slot-1' class='oiad oi-axt oiadv'> id='top-searched-articles'>ರಾಜ್ಯದಲ್ಲಿ
ದಲಿತರ ಮೇಲೆ ನಡೆಯುತ್ತಿರುವ ದೌರ್ಜನ್ಯವನ್ನು ತಡೆಗಟ್ಟಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸಲು ಶೀಘ್ರವೇ ಎಲ್ಲಾ ದಲಿತ ಸಂಘಟನೆ ಮುಖಂಡರ ಸಭೆ ಕರೆಯಲಾಗುವುದು ಎಂದು ಮಾನ್ಯ ಮುಖ್ಯಮಂತ್ರಿ ತಿಳಿಸಿದರು.











Click it and Unblock the Notifications