ಅಬಕಾರಿ ಇಲಾಖೆಗೆ 200 ಸಬ್‌ಇನ್ಸ್‌ಪೆಕ್ಟರ್ ನೇಮಕ: ರೇಣುಕಾ

ಈ ಪ್ರಸ್ತಾವಕ್ಕೆ ಹಣಕಾಸು ಇಲಾಖೆ ಒಪ್ಪಿಗೆ ಸೋಚಿದೆ. ಶೀಘ್ರವೇ ಲೋಕಸೇವಾ ಆಯೋಗದ ಮೂಲಕ ನೇಮಕ ಕಾರ್ಯಕ್ಕೆ ಚಾಲನೆ ನೀಡಲಾಗುವುದು ಎಂದರು.
ಇತ್ತೀಚೆಗೆ 100 ಸಬ್‌ಇನ್ಸ್‌ಪೆಕ್ಟರ್ ಹಾಗೂ 350 ಗಾರ್ಡ್‌ಗಳು ಮತ್ತು 100 ಮಂದಿ ಚಾಲಕರನ್ನು ನೇಮಕ ಮಾಡಿಕೊಳ್ಳುವ ಪ್ರಕ್ರಿಯೆ ಪೂರ್ಣ ಗೊಳಿಸಲಾಗಿದೆ. ಈಗ ಮತ್ತೆ 350 ಗಾರ್ಡ್ ಹಾಗೂ 200 ಸಬ್‌ಇನ್ಸ್‌ಪೆಕ್ಟರ್ ಗಳನ್ನೂ ನೇಮಕ ಮಾಡಿಕೊಳ್ಳಲಾಗುವುದು ಎಂದರು.
ಇತ್ತೀಚೆಗೆ ಗೋವಾದಿಂದ ಮದ್ಯ ವನ್ನು ಅಕ್ರಮವಾಗಿ ಸಾಗಿಸುತ್ತಿದ್ದವ ರೊಂದಿಗೆ 4 ಮಂದಿ ರೈಲ್ವೆ ಇಲಾಖೆಯ ಸಿಬ್ಬಂದಿ ಕೂಡಾ ಶಾಮೀಲಾಗಿರುವುದನ್ನು ಪತ್ತೆ ಹಚ್ಚಲಾಗಿದೆ. ಅವರನ್ನು ಬಂಧಿಸಿ ಕ್ರಮ ಕೈಗೊಳ್ಳುವಂತೆ ರೈಲ್ವೆ ಇಲಾಖೆಯ ವಿಭಾಗೀಯ ವ್ಯವಸ್ಥಾಪಕರಿಗೆ ಪತ್ರ ಬರೆದಿರುವುದಾಗಿ ಸಚಿವ ರೇಣುಕಾಚಾರ್ಯ ತಿಳಿಸಿದರು.
ಮದ್ಯ ಮಾರಾಟದಲ್ಲಿ ಗುಲ್ಪರ್ಗ ಜಿಲ್ಲೆ ರಾಜ್ಯದಲ್ಲಿಯೇ ಮೊದಲ ಸ್ಥಾನದಲ್ಲಿದೆ. ಅಬಕಾರಿ ಇಲಾಖೆ ಬಿಡುಗಡೆ ಮಾಡಿರುವ ಅಂಕಿ ಅಂಶಗಳ ಪ್ರಕಾರ ಗುಲ್ಬರ್ಗ ಜಿಲ್ಲೆಯಲ್ಲಿ ಮದ್ಯ ಮಾರಾಟ ಭರ್ಜರಿ ಯಾಗಿ ನಡೆದಿದ್ದು, ಅಗ್ರ ಸ್ಥಾನದಲ್ಲಿದೆ ಎಂದಿದ್ದಾರೆ.












Click it and Unblock the Notifications