ಬಳ್ಳಾರಿ ರೆಡ್ಡಿಗೆ ವಾರಂಟ್ ಜಾರಿಗೊಳಿಸದ ಪೊಲೀಸರ ವಿರುದ್ಧ ಕ್ರಮ

ಸಮನ್ಸ್ ಜಾರಿ ಮಾಡದ ಮತ್ತು ನ್ಯಾಯಾಲಯಕ್ಕೆ ಜನಾರ್ದನ ರೆಡ್ಡಿಯನ್ನು ಹಾಜರು ಪಡಿಸದ ಪೊಲೀಸರ ಕ್ರಮ ಪ್ರಶ್ನಿಸಿ ವಕೀಲ ಜಿಆರ್ ಮೋಹನ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಜೆಎಸ್ ಖೇಹರ್ ಮತ್ತು ನ್ಯಾ. ಅಶೋಕ್ ಬಿ. ಹಿಂಚಿಗೇರಿ ಅವರ ವಿಭಾಗೀಯ ಪೀಠ, ಬುಧವಾರ ಈ ಆದೇಶ ನೀಡಿದೆ.
ಪೊಲೀಸ್ ಅಧಿಕಾರಿಗಳೇ ಕಾರಣ: ಬುಧವಾರ ವಿಚಾರಣೆಗೆ ಹಾಜರಾದ ಗೃಹ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಸ್‌ಎಂ ಜಾಮ್‌ದಾರ್, ಜನಾರ್ದನ ರೆಡ್ಡಿಗೆ ನ್ಯಾಯಾಲಯ ಸಮನ್ಸ್ ಹಾಗೂ ವಾರೆಂಟ್ ಜಾರಿತ್ತು. ರೆಡ್ಡಿಗೆ ಅವುಗಳನ್ನು ತಲುಪಿಸುವಲ್ಲಿ, ನಿವೃತ್ತ ಡಿಜಿ-ಐಜಿಪಿ ಡಾ. ಅಜಯ್ ಕುಮಾರ್ ಸಿಂಗ್, ಬಳ್ಳಾರಿ ಎಸ್ಪಿಯಾಗಿದ್ದ ಸೀಮಂತ್ ಕುಮಾರ್ ಸಿಂಗ್ ಸೇರಿದಂತೆ 9 ಮಂದಿ ಪೊಲೀಸ್ ಅಧಿಕಾರಿಗಳು ಬೇಜವಾಬ್ದಾರಿಯಾಗಿ ಕಾರ್ಯ ನಿರ್ವಹಿಸಿದ್ದಾರೆ ಎಂದು ವಿಭಾಗೀಯ ಪೀಠದ ಗಮನಕ್ಕೆ ತಂದರು.
ಪೊಲೀಸ್ ಅಧಿಕಾರಿಗಳು ರೆಡ್ಡಿಯು ಬಳ್ಳಾರಿಯಲ್ಲೆ ಇದ್ದರೂ ಕೂಡ, ಅವರು ನಮ್ಮ ಕೈಗೆ ಸಿಗುತ್ತಿಲ್ಲ. ಪ್ರವಾಸದಲ್ಲಿದ್ದಾರೆ ಆದುದರಿಂದ ಸಮನ್ಸ್ ತಲುಪಿಸಲು ಸಾಧ್ಯವಾಗಲಿಲ್ಲ ಎಂಬಿತ್ಯಾದಿ ಸುಳ್ಳು ಕಾರಣಗಳನ್ನು ನೀಡಿ ನ್ಯಾಯಾಲಯವನ್ನು ದಿಕ್ಕು ತಪ್ಪಿಸಿದ್ದಾರೆ. ಪ್ರಕರಣದ ಕುರಿತು ತನಿಖೆ ನಡೆಸುವ ಮತ್ತು ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೂಡ ಕೈಗೊಳ್ಳಲಿಲ್ಲ.
ಕರ್ತವ್ಯ ನಿಷ್ಠೆ ತೋರಿಸುವಲ್ಲಿ ವಿಫಲವಾದ ಕೆಳವರ್ಗದ ಅಧಿಕಾರಿಗಳಾದ ತೋರಂಗಲ್ ಸಿಪಿಸಿಯಾಗಿದ್ದ ಸಿ. ಸೂರ್ಯ ನಾರಾಯಣ ಮತ್ತು ಪಿಎಸ್‌ಐ ಎಂ.ಉಮೇಶ್ ಮತ್ತು ಸಂಡೂರು ಸಿಪಿಐಯಾಗಿದ್ದ ವೈ.ಎಚ್. ರಮಾಕಾಂತ್‌ರನ್ನು ಗೃಹ ಇಲಾಖೆ ಅಮಾನತುಗೊಳಿಸಿದೆ. ಆದರೆ, ಮೇಲ್ವರ್ಗದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗಲಿಲ್ಲ ಎಂದು ಜಾಮ್‌ದಾರ್ ವಿಭಾಗೀಯ ಪೀಠಕ್ಕೆ ತಿಳಿಸಿದರು.
ಈ ಹಿನ್ನೆಲೆಯಲ್ಲಿ ಕೂಡ್ಲಿಯ ಸಿಐಎಸ್‌ಪಿಯಾಗಿದ್ದ ಎಚ್.ವೈ.ತುರೈ, ಬಳ್ಳಾರಿ ಹೆಚ್ಚುವರಿ ಎಸ್ಪಿಯಾಗಿದ್ದ ಅಶೋಕ್ ಕುರೇರ್, ಬಳ್ಳಾರಿ ಎಸ್ಪಿಯಾಗಿದ್ದ ಎಂ.ಎನ್.ನಾಗರಾಜ್, ಸೀಮಂತ್ ಕುಮಾರ್, ಪಶ್ವಿಮ ಘಟ್ಟದ ಐಜಿಪಿಯಾಗಿದ್ದ ಎಚ್.ಎನ್.ಎಸ್. ರಾವ್ ಮತ್ತು ನಿವೃತ್ತ ಡಿಜಿ-ಐಜಿಪಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸರಕಾರಕ್ಕೆ ಶಿಫಾರಸು ಮಾಡಿ ಎಂದು ವಿಭಾಗೀಯ ಪೀಠ ಜಾಮ್‌ದಾರ್‌ಗೆ ನಿರ್ದೇಶಿಸಿತ್ತು.
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications