ಕೊಡಗಿನಲ್ಲಿ ಆ.28ರಂದು ಉದ್ಯೋಗ ಮೇಳ

Mega job fair in Coorg on Aug 28
ಕುಶಾಲನಗರ, ಆಗಸ್ಟ್ 26 : ಇದೇ ಮೊದಲ ಬಾರಿಗೆ ಕೊಡಗಿನ ಕುಶಾಲನಗರದಲ್ಲಿ ಬೃಹತ್ ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿದ್ದು, ಆ ಮೂಲಕ 3,500 ಮಂದಿಗೆ ಉದ್ಯೋಗ ಪಡೆಯುವ ಅವಕಾಶವನ್ನು ಒದಗಿಸಲಾಗಿದೆ.

ಆಗಸ್ಟ್ 28ರಂದು ಕುಶಾಲನಗರದ ಸರ್ಕಾರಿ ಪಾಲಿಟೆಕ್ನಿಕ್‌ನಲ್ಲಿ ಬೆಳಿಗ್ಗೆಯಿಂದಲೇ ಉದ್ಯೋಗ ಮೇಳ ಆರಂಭಗೊಳ್ಳಲಿದ್ದು, ಇದನ್ನು ಮಂಗಳೂರು ಉದ್ಯೋಗ ಮತ್ತು ತರಬೇತಿ ಇಲಾಖೆ, ಮಾನವ ಸಂಪನ್ಮೂಲ ಅಭಿವೃದ್ಧಿ ಕೇಂದ್ರ, ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ ಮಂಗಳೂರು ಮತ್ತು ಕುಶಾಲನಗರ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಆಯೋಜಿಸಿವೆ.

ಒಂದು ದಿನದ ಬೃಹತ್ ಉದೋಗ ಮೇಳದಲ್ಲಿ ಪ್ರತಿಷ್ಠಿತ 25 ಕಂಪನಿಗಳು ಪಾಲ್ಗೊಳ್ಳಲಿದ್ದು, ನೇರ ಸಂದರ್ಶನದ ಮೂಲಕ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಅಲ್ಲದೆ, 3,500 ಮಂದಿ ನಿರುದ್ಯೋಗಿ ಯುವಕ -ಯುವತಿಯರಿಗೆ ವಿವಿಧ ಕಂಪನಿಗಳಲ್ಲಿ ಉದ್ಯೋಗಾವಕಾಶ ದೊರೆಯಲಿದೆ. ಉದ್ಯೋಗಮೇಳದಲ್ಲಿ ಎಸ್‌ಎಸ್‌ಎಲ್‌ಸಿ ಉತ್ತೀರ್ಣ ಮತ್ತು ಅನುತ್ತೀರ್ಣ, ಐಟಿಐ, ಪದವಿ ಮತ್ತು ಸ್ನಾತಕೋತ್ತರ, ಕಂಪ್ಯೂಟರ್ ತರಬೇತಿ ಹೊಂದಿದ ಅಭ್ಯರ್ಥಿಗಳು ಭಾಗವಹಿಸಬಹುದು.

ಅಭ್ಯರ್ಥಿಗಳು ವಿದ್ಯಾರ್ಹತೆಗೆ ಸಂಬಂಧಿಸಿದ ಮೂಲ ದಾಖಲೆಗಳೊಂದಿಗೆ ಜನ್ಮದಿನಾಂಕ ದೃಢೀಕರಣ, ಭಾವಚಿತ್ರ ಹಾಗೂ ವೈಯಕ್ತಿಕ ವಿವರಗಳೊಂದಿಗೆ ಸಂದರ್ಶನಕ್ಕೆ ಹಾಜರಾಗಬಹುದು. ಕೊಡಗು ಮಾತ್ರವಲ್ಲದೆ, ಇತರ ಜಿಲ್ಲೆಗಳ ತಾಂತ್ರಿಕ ಹಾಗೂ ತಾಂತ್ರಿಕೇತರ ಉದ್ಯೋಗಾಕಾಂಕ್ಷಿಗಳು ಕೂಡ ಭಾಗವಹಿಸಬಹುದು.

ಈ ಉದ್ಯೋಗ ಮೇಳದಲ್ಲಿ ಸೆಕ್ಯೂರಿಟಿ ಗಾರ್ಡ್ ಮತ್ತು ಸಹಾಯಕರ ಹುದ್ದೆಗಳಿಗೂ ನೇರ ಸಂದರ್ಶನ ಮೂಲಕ ಆಯ್ಕೆ ನಡೆಯಲಿದ್ದು, ಆಸಕ್ತಿವುಳ್ಳವರು ಪಾಲ್ಗೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ನಂ. 9880215199, 9449475811, 9480083327 ಸಂಪರ್ಕಿಸಬಹುದು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+