ಹೈಕೋರ್ಟ್ ನಿಂದ ಗಣಿ ಅರ್ಜಿ ಹಿಂಪಡೆದ ಯಡಿಯೂರಪ್ಪ

Yeddyurappa takes back his plea from HC
ಬೆಂಗಳೂರು, ಆ.29: ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದಂತೆ ಲೋಕಾಯುಕ್ತರು ಸಲ್ಲಿಸಿದ ವರದಿ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿ, ಮಾಜಿ ಸಿಎಂ ಯಡಿಯೂರಪ್ಪ ಸಲ್ಲಿಸಿದ್ದ ಅರ್ಜಿಯನ್ನು ಹಿಂಪಡೆದಿದ್ದಾರೆ.

ಅಕ್ರಮ ಗಣಿಗಾರಿಕೆ ಕುರಿತಂತೆ ನಿಕಟಪೂರ್ವ ಲೋಕಾಯುಕ್ತ ಎನ್ ಸಂತೋಷ್ ಹೆಗ್ಡೆ ಅವರು ಸಲ್ಲಿಸಿದ ಎರಡನೇ ವರದಿಯಲ್ಲಿ ನನ್ನ ಹೆಸರನ್ನು ಅನಗತ್ಯವಾಗಿ ಸೇರಿಸಲಾಗಿದೆ. ನಾನು ಯಾವುದೇ ಗಣಿಗಾರಿಕೆ ನಡೆಸಿಲ್ಲ.

ಲೋಕಾಯುಕ್ತ ವರದಿಯನ್ನು ನ್ಯಾಯಾಲಯ ಪರಿಗಣಿಸಬಾರದು ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು.

ನ್ಯಾಯಮೂರ್ತಿ ಅಜಿತ್ ಜೆ ಬಂಜಲ್ ಹಾಗೂ ಡಿವಿ ನಾಗರತ್ನ ಅವರಿದ್ದ ವಿಭಾಗೀಯ ಪೀಠಕ್ಕೆ ಯಡಿಯೂರಪ್ಪ ಪರ ವಕೀಲರು, ತಮ್ಮ ಕಕ್ಷಿದಾರರು ಅರ್ಜಿಯನ್ನು ಹಿಂಪಡೆದಿರುವುದಾಗಿ ಹೇಳಿದ್ದಾರೆ.

ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ರಾಜ್ಯಪಾಲರು ಹೊರಡಿಸಿದ್ದ ಪ್ರಾಸಿಕ್ಯೂಷನ್ ಆದೇಶಕ್ಕೆ ತಡೆಯಾಜ್ಞೆ ನೀಡಲು ರಾಜ್ಯ ಹೈಕೋರ್ಟ್ ನಿರಾಕರಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+