ಮರೆತುಹೋದ ಶಾಸ್ತ್ರಿಯನ್ನು ನೆನಪಿಸಿದ ಅಣ್ಣಾ ಹಜಾರೆ
ಅಣ್ಣಾ
ಹಜಾರೆ ಹೆಸರು ಕೇಳದ ಭಾರತೀಯ ಇಲ್ಲ ಹಾಗೂ ಇನ್ನು ಮುಂದೆ ಭಾರತೀಯರಿಗೆ ಆ ಹೆಸರು ಹೊಸದು ಅಲ್ಲ ಮತ್ತು ಹೊಸ ಮುಖವೂ ಅಲ್ಲ. 74ರ ಹರೆಯದ ಗಾಂಧೀವಾದಿ ಇಡೀ ದೇಶದ ಜನರನ್ನು ಒಗ್ಗೂಡಿಸಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ ಖ್ಯಾತಿ ಅವರದು. ಭ್ರಷ್ಟಾಚಾರ ವಿರೋಧಿ ಕಾಯ್ದೆಯಾದ ಜನ ಲೋಕಪಾಲ ಮಸೂದೆ ಜಾರಿಗೆ ಒತ್ತಾಯಿಸಿ ಹೋರಾಟ ನಡೆಸಿದ ಅಣ್ಣಾರಲ್ಲಿ ಹಲವರು ಒಬ್ಬ ನಿಷ್ಕಳಂಕ ಸಮಾಜ ಸುಧಾರಕನನ್ನು ಕಂಡಿದ್ದಾರೆ ಮತ್ತು ಅವರು ಮಾಡಿದ ಹೋರಾಟ ಎರಡನೇ ಸ್ವಾತಂತ್ರ್ಯ ಹೋರಾಟವೆಂದೇ ಎಂದು ಪರಿಗಣಿಸಿದ್ದಾರೆ. id="toptextpromo">ಅಣ್ಣಾ
ಅವರ ಸರಳಾತಿ ಸರಳ ಜೀವನ, ನಿಷ್ಕಳಂಕ ವ್ಯಕ್ತಿತ್ವ, ಪ್ರಾಮಾಣಿಕತೆ, ನೇರವಂತಿಕೆ, ತ್ಯಾಗ ಅಹಿಂಸಾ ಮನೋಭಾವ, ಅವರ ದಿರಿಸು, ಅವರ ನೋಟ, ಅವರ ದೇಶಪ್ರೇಮ, ಇಂದಿನ ದಿನ ಮರೆತೇಹೋಗಿರುವ ಭಾರತದ ಮಾಜಿ ಪ್ರಧಾನಿ ದಿವಂಗತ ಲಾಲ್ ಬಹಾದೂರ್ ಶಾಸ್ತ್ರಿಯ(1904-1966)ವರನ್ನು ಕಣ್ಣಮುಂದೆ ತಂದು ನಿಲ್ಲಿಸುತ್ತದೆ. ಶಾಸ್ತ್ರೀಯವರು 'ಜೈ ಜವಾನ್ ಜೈ ಕಿಸಾನ್' ಅಂದಿದ್ದರೆ, ಅಣ್ಣಾ ಕೂಡ 'ರೈತರಿಲ್ಲದಿದ್ದರೆ ಈ ದೇಶವೇ ಇಲ್ಲ' ಎಂಬ ಸಂದೇಶ ಇಡೀ ದೇಶಕ್ಕೆ ರವಾನಿಸಿದ್ದಾರೆ.. ಶಾಸ್ತ್ರೀಜಿಯಂಥ ವ್ಯಕ್ತಿಯೊಬ್ಬರು ನಮ್ಮ ಕಣ್ಣಮುಂದಿರುವುದು ನಿಜಕ್ಕೂ ನಮ್ಮ ಸೌಭಾಗ್ಯವೇ ಸರಿ. id='are-slot-1' class='oiad oi-axt oiadv'> id='top-searched-articles'>ಕೆಲ
ದಿನಗಳ ನಂತರ ಅಥವಾ ಕೆಲ ವರ್ಷಗಳ ನಂತರ ಲಾಲ್ ಬಹಾದೂರ್ ಶಾಸ್ತ್ರಿಯವರು ಜನಮಾನಸದಿಂದ ಮರೆತುಹೋದಂತೆ ಅಣ್ಣಾ ಹಜಾರೆಯವರು ಕೂಡ ಮರೆತುಹೋದರೆ ಆಶ್ಚರ್ಯವಿಲ್ಲ. ಶಾಸ್ತ್ರೀಜಿಯವರ ಜನುಮದಿನ ಮಹಾತ್ಮಾ ಗಾಂಧೀಜಿಯವರ ಜನುಮದಿನದಂದೇ ಇದೆ ಎಂದು ಎಷ್ಟು ಜನರಿಗೆ ಗೊತ್ತಿದೆ? ಗೊತ್ತಿದ್ದರೂ ಎಷ್ಟು ಜನ ಅಷ್ಟೇ ಶ್ರದ್ಧೆಯಿಂದ ಆಚರಿಸುತ್ತಾರೆ? ಭ್ರಷ್ಟಾಚಾರದ ವಿರುದ್ಧ ಇಡೀ ದೇಶವನ್ನು ಬಡಿದೆಬ್ಬಿಸಿರುವ ಅಣ್ಣಾ ಹಜಾರೆ ವಿಷಯದಲ್ಲಿ ಹಾಗಾಗದಿರಲಿ ಎಂಬುದಷ್ಟೇ ನಮ್ಮ ಆಶಯ.











Click it and Unblock the Notifications