ಮತ್ತೊಂದು ವಿವಾದ ಮೈಮೇಲೆ ಎಳೆದುಕೊಂಡ ಮೋದಿ

gujrat-former-minister-suspended-from-bjp
ಅಹ್ಮದಾಬಾದ್, ಸೆ.4: ಗುಜರಾತ್‌ನ ಆಡಳಿತಾರೂಢ ಬಿಜೆಪಿ ಪಕ್ಷ ಮತ್ತೊಂದು ವಿವಾದವನ್ನು ಮೈಮೇಲೆ ಎಳೆದುಕೊಂಡಿದೆ. ಇದರಿಂದ ಮುಖ್ಯಮಂತ್ರಿ ನರೇಂದ್ರ ಮೋದಿ ಅವರೂ ಇಕ್ಕಟ್ಟಿಗೆ ಸಿಲುಕಿಕೊಂಡಿದ್ದಾರೆ.

ಮಾಜಿ ಗೃಹ ಸಚಿವ ಹರೇನ್ ಮಾಂಡ್ಯ ಹತ್ಯೆ ಪ್ರಕರಣವನ್ನು ಮತ್ತೆ ತನಿಖೆಗೆ ಒಪ್ಪಿಸಬೇಕು ಎಂದು ಆಗ್ರಹಿಸುವ ಮೂಲಕ ಪಕ್ಷದ ನಿಲುವನ್ನು ಕೆಣಕಿದ ಮಾಜಿ ಸಚಿವ ಜಸ್ಪಾಲ್ ಸಿಂಗ್ ಅವರನ್ನು ಬಿಜೆಪಿ ಪ್ರಾಥಮಿಕ ಸದಸ್ಯತ್ವದಿಂದ ಉಚ್ಛಾಟಿಸಲಾಗಿದೆ.

8 ವರ್ಷ ಹಳೆಯದಾದ ಪ್ರಕರಣದಲ್ಲಿ 12 ಮಂದಿ ಆರೋಪಿಗಳನ್ನು ಗುಜರಾತ್ ಹೈಕೋರ್ಟ್ ಇತ್ತೀಚೆಗೆ ಖುಲಾಸೆಗೊಳಿಸಿತ್ತು. ಇದರಿಂದ ಅಸಮಾಧಾನಗೊಂಡ ಜಸ್ಪಾಲ್ ಅವರು ಪಾಂಡ್ಯನ್ ಹತ್ಯೆ ಪ್ರಕರಣದಲ್ಲಿ ಮರು ವಿಚಾರಣೆ ಕೈಗೆತ್ತಿಕೊಳ್ಳಬೇಕು ಎಂದು ಆಗ್ರಹಿಸಿ, ಪಕ್ಷದ ಅಧ್ಯಕ್ಷ ನಿತಿನ್ ಗಡ್ಕರಿ ಅವರಿಗೆ ಪತ್ರ ಬರೆದಿದ್ದರು.

ಕಳೆದ ವಾರ ನ್ಯಾ. ಆರ್ಎ ಮೆಹ್ತಾ ಅವರನ್ನು ಲೋಕಾಯುಕ್ತರನ್ನಾಗಿ ನೇಮಿಸಿದ ರಾಜ್ಯಪಾಲರ ಕ್ರಮವನ್ನು ಜಸ್ಪಾಲ್ ಕೊಂಡಾಡಿದ್ದರು. ಈ ಹಿನ್ನೆಲೆಯಲ್ಲಿ ಪಕ್ಷವು ಅನಿವಾರ್ಯವಾಗಿ ಶಿಸ್ತು ಕ್ರಮ ಕೈಗೊಂಡಿದೆ ಎಂದು ವಡೋದರಾ ಬಿಜೆಪಿ ಘಟಕದ ಅಧ್ಯಕ್ಷ ಭರತ್ ದಂಗಾರ್ ಭಾನುವಾರ ಹೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+