ಜನಾರ್ದನ ರೆಡ್ಡಿ ನಿವಾಸದ ಮೇಲೆ ಸಿಬಿಐ ದಾಳಿ, ಬಂಧನ
ಬಳ್ಳಾರಿ,
ಸೆ.5: ಬಳ್ಳಾರಿಯ ರೆಡ್ಡಿ ಸೋದರರ ಪೈಕಿ ಒಬ್ಬರಾದ ಗಾಲಿ ಜನಾರ್ದನ ರೆಡ್ಡಿ ಅವರ ಸ್ಥಳೀಯ ನಿವಾಸ 'ಕುಟೀರ'ದ ಮೇಲೆ ಸೋಮವಾರ ಬೆಳ್ಳಂಬೆಳಗ್ಗೆ ಸಿಬಿಐ ಅಧಿಕಾರಿಗಳು ರೇಡ್ ಮಾಡಿದ್ದಾರೆ. ಮಾಜಿ ಪ್ರವಾಸೋದ್ಯಮ ಸಚಿವ ಜನಾರ್ದನ ರೆಡ್ಡಿಯನ್ನು ಬಂಧಿಸಲಾಗಿದೆ. id="toptextpromo">ಇದೇ
ವೇಳೆ ಓಬಳಾಪುರಂ ಮೈನಿಂಗ್ ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ಬಿ. ಶ್ರೀನಿವಾಸ್ ರೆಡ್ಡಿ ಅವರ ನಿವಾಸದ ಮೇಲೂ ಸಿಬಿಐ ತಂಡ ದಾಳಿ ಮಾಡಿದೆ. ಅವರನ್ನೂ ಬಂಧಿಸಲಾಗಿದೆ. ಓಬಳಾಪುರಂ ಮೈನಿಂಗ್ ಕಂಪನಿ ಅವ್ಯವಹಾರದ ಕುರಿತು ಕಳೆದ ಎರಡು ವರ್ಷಗಳಿಂದ ಆಂಧ್ರಪ್ರದೇಶದ ಹೈಕೋರ್ಟಿನಲ್ಲಿ ವಿಚಾರಣೆ ನಡೆದಿತ್ತು. id='are-slot-1' class='oiad oi-axt oiadv'> id='top-searched-articles'>ಆದರೆ
ಕರ್ನಾಟಕ ಲೋಕಾಯುಕ್ತರ ಅಕ್ರಮ ಗಣಿಗಾರಿಕೆ ವರದಿಯ ಫಲವಾಗಿ ಈ ದಾಳಿ ನಡೆದಿಲ್ಲ ಎಂಬುದು ಗಮನಾರ್ಹ. ಇದೀಗ ಬಂದ ವರ್ತಮಾನದ ಪ್ರಕಾರ ಜನಾರ್ದನ ರೆಡ್ಡಿ ಅವರ ಬೆಂಗಳೂರು ನಿವಾಸದ ( ಯಲಹಂಕದ 'ಪಾರಿಜಾತ' ) ಮೇಲೂ ದಾಳಿ ನಡೆದಿದ್ದು, ಮಹತ್ವದ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ನಮ್ಮ ವರದಿಗಾರರು ಎಸ್ ಎಮ್ ಎಸ್ ಮಾಡಿದ್ದಾರೆ. ಹೆಚ್ಚಿನ ವಿವರಗಳಿಗೆ ನಿರೀಕ್ಷಿಸಿ.











Click it and Unblock the Notifications