ಕಟ್ಟಾ ಸುಬ್ರಮಣ್ಯ ನ್ಯಾಯಾಂಗ ಬಂಧನ ವಿಸ್ತರಣೆ

ಸೋಮವಾರ ಪ್ರಕರಣದ ವಿಚಾರಣೆ ಕೈಗೆತ್ತಿಕೊಂಡ ಲೋಕಾಯುಕ್ತ ನ್ಯಾಯಾಲಯ ಕಟ್ಟಾ ಸುಬ್ರಮಣ್ಯ (ಕೈದಿ ನಂ. 7801) ಮತ್ತು ಅವರ ಪುತ್ರ ಕಟ್ಟಾ ಜಗದೀಶ್ (ಕೈದಿ ನಂ. 7802) ಅವರ ನ್ಯಾಯಾಂಗ ಬಂಧನವನ್ನು ವಿಸ್ತರಿಸಿ, ವಿಚಾರಣೆಯನ್ನು ಸೆಪ್ಟೆಂಬರ್ 19ಕ್ಕೆ ಮುಂದೂಡಿತು.
ಅನಾರೋಗ್ಯದಿಂದ ಬಳಲುತ್ತಿರುವ ಮಾಜಿ ಸಚಿವ ಕಟ್ಟಾ ಸುಬ್ರಮಣ್ಯ ನಾಯ್ಡು ಅವರು ಆಂಬುಲೆನ್ಸ್ ನಲ್ಲಿಯೇ ನ್ಯಾಯಾಲಯಕ್ಕೆ ಹಾಜರಾದರು. ಕಟ್ಟಾ, ಇಟಾಸ್ಕಾ ಕಂಪನಿಗೆ ಅನೂಕೂಲ ಮಾಡಿಕೊಟ್ಟ ಆರೋಪ ಹೊತ್ತಿದ್ದಾರೆ.
ಈ ಮಧ್ಯೆ ಪ್ರಕರಣದ ಮೂರನೇ ಆರೋಪಿ ಇಟಾಸ್ಕಾದ ಶ್ರೀನಿವಾಸ ಅವರು ನ್ಯಾಯಾಲಯಕ್ಕೆ ಹಾಜರಾಗಿ ತಮ್ಮ ಆರೋಗ್ಯ ಸರಿಯಿಲ್ಲವೆಂದು ಅಲವತ್ತುಕೊಂಡರು. ಇದಕ್ಕೆ ಸ್ಪಂದಿಸಿದ ನ್ಯಾಯಮೂರ್ತಿಗಳು ಈ ಆರೋಪಿಯನ್ನೂ ಆಂಬುಲೆನ್ಸ್ ನಲ್ಲಿಯೇ ವಾಪಸ್ ಕರೆದುಕೊಂಡು ಹೋಗುವಂತೆ ಸೂಚಿಸಿದರು. ಜತೆಗೆ ಅವರಿಗೆ ಸೂಕ್ತ ಚಿಕಿತ್ಸೆ ಕಲ್ಪಿಸುವಂತೆಯೂ ಜೈಲರ್ ಗೆ ಆದೇಶಿಸಿದರು.












Click it and Unblock the Notifications