ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕದ ಅಕ್ರಮ ಗಣಿಗಾರಿಕೆ ಕೇಸ್ ಸಿಬಿಐಗೆ ವಹಿಸಲಿ

By Mahesh
|
Google Oneindia Kannada News

Santosh Hegde on CBI probe
ಬೆಂಗಳೂರು, ಸೆ. 5: ಮಾಜಿ ಪ್ರವಾಸೋದ್ಯಮ ಸಚಿವ ಗಾಲಿ ಜನಾರ್ದನ ರೆಡ್ಡಿ ಒಡೆತನದ ಓಬಳಾಪುರಂ ಗಣಿ ಕಂಪೆನಿ ರಾಜ್ಯದಲ್ಲಿ ಅಕ್ರಮ ಗಣಿಗಾರಿಕೆ ಕುರಿತು ಸಿಬಿಐ ತನಿಖೆ ನಡೆಸಬೇಕು ಎಂದು ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಎನ್. ಸಂತೋಷ್ ಹೆಗ್ಡೆ ಹೇಳಿದ್ದಾರೆ.

ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿಯವರ ಬಂಧನದ ಹಿನ್ನೆಲೆಯಲ್ಲಿ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ನಡೆದಿರುವ ಅಕ್ರಮ ಗಣಿಗಾರಿಕೆಯ ಕುರಿತು ಸಮಗ್ರ ತನಿಖೆ ನಡೆಸಿ ದಾಖಲೆ ಸಮೇತ ವರದಿ ನೀಡಿದ್ದೇವೆ. ಜನಾರ್ದನ ರೆಡ್ಡಿ ಕುಟುಂಬ ಹಾಗೂ ಶ್ರೀರಾಮುಲು ಅವರು ಅಕ್ರಮ ವ್ಯವಹಾರದಲ್ಲಿ ತೊಡಗಿರುವುದನ್ನು ಸ್ಪಷ್ಟವಾಗಿ ವರದಿಯಲ್ಲಿ ದಾಖಲಿಸಲಾಗಿದೆ.

ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿ ನಡೆದಿರುವ ಅಕ್ರಮ ಗಣಿಗಾರಿಕೆಯ ಬಗ್ಗೆ ಇನ್ನೂ ಹೆಚ್ಚಿನ ತನಿಖೆ ನಡೆಸುವ ಅಗತ್ಯವಿದೆ. ಸರ್ಕಾರ ಈ ಬಗ್ಗೆ ಕೂಡಲೇ ಕ್ರಮ ಕೈಗೊಂಡರೆ ಇನ್ನಷ್ಟು ಅಪರಾಧಿಗಳನ್ನು ಸಾರ್ವಜನಿಕ ಮುಂದೆ ತರಬಹುದು ಎಂದು ಸಂತೋಷ್ ಹೆಗ್ಡೆ ಹೇಳಿದರು.

ಸಿಬಿಐಗೆ ಸಹಕಾರ: ಅಕ್ರಮ ಗಣಿಗಾರಿಕೆ ಕುರಿತ ಲೋಕಾಯುಕ್ತ ಎರಡನೇ ವರದಿಯನ್ನು ಸಿಬಿಐ ನೀಡಲು ಕರ್ನಾಟಕ ಲೋಕಾಯುಕ್ತ ಸಿದ್ಧವಿದೆ. ಮುಖ್ಯ ಕಾರ್ಯದರ್ಶಿಗಳಿಗೆ ಈಗಾಗಲೇ ಕೆಲ ಮುಖ್ಯ ದಾಖಲೆಗಳನ್ನು ಕಳುಹಿಸಲಾಗಿದೆ. ಕರ್ನಾಟಕ ಸರ್ಕಾರ ಅಗತ್ಯ ದಾಖಲೆಗಳನ್ನು ಸಿಬಿಐಗೆ ರವಾನಿಸಬಹುದಾಗಿದೆ ಎಂದು ಲೋಕಾಯುಕ್ತ ಶಿವರಾಜ್ ವಿ ಪಾಟೀಲ್ ಹೇಳಿದ್ದಾರೆ.

English summary
Former Karnataka Lok Ayukta Santosh Hegde said CBI should probe illegal mining activities in Karnataka. Hegde welcomed Janardhan Reddy detention.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X