ಲೋಕಾಯುಕ್ತರಿಗೆ ಹೆದರಿ ಇನ್ಸ್‌ಪೆಕ್ಟರ್ ರತ್ನಾಕರ ಶೆಟ್ಟಿ ಪರಾರಿ

ವಾಕಿಟಾಕಿ ಮತ್ತು ಮೊಬೈಲ್ ಮೂಲಕ ಆರೋಪಿಗಳನ್ನು ಸಂಪರ್ಕಿಸಲು ಪೊಲೀಸರು ನಿರಂತರವಾಗಿ ಪ್ರಯತ್ನಿಸಿದರೂ ಅವರು ಇನ್ನೂ ಸಂಪರ್ಕಕ್ಕೆ ಸಿಕ್ಕಿಲ್ಲ. ನಿಮಗೇನಾದರೂ ಇವರ ಬಗ್ಗೆ ಸುಳಿವು ಲಭ್ಯವಾದರೆ ತಕ್ಷಣ ಲೋಕಾಯುಕ್ತ ಪೊಲೀಸರಿಗೆ ಮಾಹಿತಿ ನೀಡುವುದು.
ಹೊಲಿಗೆ ಯಂತ್ರದ ಅಂಗಡಿ ಮಾಲೀಕರೊಬ್ಬರನ್ನು ಸುಳ್ಳು ಪ್ರಕರಣದಲ್ಲಿ ಸಿಲುಕಿಸಿ ಐದು ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಇವರಿಬ್ಬರೂ ಲೋಕಾಯುಕ್ತ ದಾಳಿಯ ಸುಳಿವು ಅರಿತು ಪರಾರಿಯಾಗಿದ್ದಾರೆ.
ಪೊಲೀಸ್ ಠಾಣೆಯ ಮೇಲೆ ದಾಳಿ ನಡೆಸಿದ ಬೆಂಗಳೂರು ನಗರ ಲೋಕಾಯುಕ್ತ ಪೊಲೀಸರು, ಇನ್ಸ್‌ಪೆಕ್ಟರ್ ಮತ್ತು ಕಾನ್‌ಸ್ಟೆಬಲ್ ಲಂಚಕ್ಕೆ ಒತ್ತಾಯಿಸಿದ್ದ ಬಗ್ಗೆ ಮಹತ್ವದ ಸಾಕ್ಷ್ಯ ಸಂಗ್ರಹಿಸಿದ್ದಾರೆ. ಹೊಲಿಗೆ ಯಂತ್ರದ ಅಂಗಡಿ ಮಾಲೀಕನನ್ನು ಅಕ್ರಮವಾಗಿ ಬಂಧನದಲ್ಲಿಟ್ಟು ದೌರ್ಜನ್ಯ ನಡೆಸಿರುವ ಬಗ್ಗೆಯೂ ಸಾಕ್ಷ್ಯ ಕಲೆ ಹಾಕಿದ್ದಾರೆ.












Click it and Unblock the Notifications