ಸಾಲ ವಾಪಸ್ ಕೇಳಿದ್ದಕ್ಕೆ ಪೊಲೀಸಪ್ಪ ನಾಯಿ ಛೂ ಬಿಟ್ಟ!

ಮುನೇಶ್ವರ ದೇವಸ್ಥಾನದ ಬಳಿಯ ನಿವಾಸಿ ಶಿವಣ್ಣ ಹಲ್ಲೆಗೊಳಗಾದವರು. ಹಲ್ಲೆ ನಡೆಸಿದ ಆರೋಪದ ಮೇಲೆ ನಗರ ಸಶಸ್ತ್ರ ಪಡೆಯ ಪೊಲೀಸ್ ಕಾನ್‌ಸ್ಟೆಬಲ್ ರಾಜಣ್ಣ ವಿರುದ್ಧ ತ್ಯಾಗರಾಜನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅದು ಯಾವುದೋ ಪೊಲೀಸ್ ನಾಯಿಯೇ ಇರಬೇಕು ಸರಿಯಾಗಿಯೇ ಕಚ್ಚಿದೆ!
ಶಿವಣ್ಣ ಕೊಳಾಯಿ ರಿಪೇರಿ ಕೆಲಸ ಮಾಡುತ್ತಾರೆ. ಅವರ ಪತ್ನಿ ಭಾರತಿ ಅವರು ರಾಜಣ್ಣನಿಗೆ ಒಂದೂವರೆ ವರ್ಷದ ಹಿಂದೆ ಸಾಲ ನೀಡಿದ್ದರು. ಆದರೆ ಆತ ಸಾಲ ಹಿಂತಿರುಗಿಸಲಿಲ್ಲ. ಹಣ ಕೇಳಲು ಶಿವಣ್ಣ, ರಾಜಣ್ಣ ಅವರ ತ್ಯಾಗರಾಜನಗರದ ನಿವಾಸಕ್ಕೆ ಹೋಗಿದ್ದಾಗ ಇಬ್ಬರ ಮಧ್ಯೆ ಜಗಳವಾಗಿದೆ.
ಶಿವಣ್ಣ ಅವರ ಮೇಲೆ ಹಲ್ಲೆ ನಡೆಸಿದ ರಾಜಣ್ಣ, ತನ್ನ ಸಾಕು ನಾಯಿಯನ್ನು ಬಿಟ್ಟು ಕಚ್ಚಿಸಿದ್ದಾರೆ. ತೀವ್ರವಾಗಿ ಗಾಯಗೊಂಡಿರುವ ಶಿವಣ್ಣ ಅವರು ಚಿಕಿತ್ಸೆ ಪಡೆದಿದ್ದಾರೆ. ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಪ್ರಕರಣ ದಾಖಲಿಸಿಕೊಂಡ ಪೊಲೀಸರು ತಿಳಿಸಿದ್ದಾರೆ.












Click it and Unblock the Notifications