ಗಗನಚುಕ್ಕಿಯಲ್ಲಿ ಜಲಪಾತೋತ್ಸವ ಸಂಭ್ರಮ

gaganachikki
ಮಂಡ್ಯ, ಸೆಪ್ಟಂಬರ್ ೧೧: ಜಿಲ್ಲೆಯ ಮಳವಳ್ಳಿ ತಾಲೂಕಿನ ಶಿವನಸಮುದ್ರದ ಗಗನಚುಕ್ಕಿಯಲ್ಲಿ ಹಮ್ಮಿಕೊಳ್ಳಲಾಗಿರುವ ಎರಡು ದಿನಗಳ ಜಲಪಾತೋತ್ಸವಕ್ಕೆ ಶನಿವಾರ ಸಂಜೆ ಸಂಜೆ ೭.೧೫ಕ್ಕೆ ವಿಧಾನಪರಿಷತ್ ಸದಸ್ಯ ಅಶ್ವತ್ಥನಾರಾಯಣರವರು ವಿದ್ಯುಕ್ತ ಚಾಲನೆ ಚಾಲನೆ ನೀಡಿದ್ದಾರೆ.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಪ್ರವಾಸೋದ್ಯಮ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗಳ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿರುವ ಜಲಪಾತೋತ್ಸವಕ್ಕೆ ಭಾನುವಾರ ತೆರೆ ಬೀಳಲಿದೆ.

ಶನಿವಾರ ಆರಂಭಗೊಂಡ ಕಾರ್ಯಕ್ರಮದಲ್ಲಿ ಮಧ್ಯಾಹ್ನ ೩ಕ್ಕೆ ಸ್ಥಳೀಯ ಕಲಾವಿದರು ಪೂಜಾಕುಣಿತ, ಡೊಳ್ಳು ಕುಣಿತ, ಸೋಮನ ಕುಣಿತ, ಗಾರುಡಿಗೊಂಬೆ ಹೀಗೆ ಜನಪದ ನೃತ್ಯ ಹಾಗೂ ಭಕ್ತಿಗೀತೆ, ಹಾಸ್ಯ ಕಲಾವಿದರ ಹಾಸ್ಯ ಚಟಾಕಿ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ರಂಗುನೀಡಿದವು.

ಈ ಸಂದರ್ಭ ಹಾಲ್ನೊರೆಯಂತೆ ಧುಮ್ಮಿಕ್ಕುವ ಗಗನಚುಕ್ಕಿ ಜಲಪಾತಕ್ಕೆ ಅಳವಡಿಸಲಾಗಿದ್ದ ವರ್ಣರಂಜಿತ ಬೆಳಕಿನ ಚಿತ್ತಾರ ರಾಜ್ಯದ ವಿವಿಧೆಡೆಗಳಿಂದ ಆಗಮಿಸಿದ್ದ ಪ್ರವಾಸಿಗರ ಮನಸೆಳೆಯಿತು.

ಜಲಪಾತೋತ್ಸವದ ಮೊದಲ ದಿನವಾದ ಶನಿವಾರ ಬೆಳಗ್ಗಿನಿಂದಲೇ ಪ್ರವಾಸಿಗರು ಸಾಗರೋಪಾದಿಯಲ್ಲಿ ಹರಿದು ಬರುತ್ತಿದ್ದು, ಇಲ್ಲಿಗೆ ಆಗಮಿಸುವ ಪ್ರವಾಸಿಗರ ಅನುಕೂಲಕ್ಕಾಗಿ ಸಾರಿಗೆ ವ್ಯವಸ್ಥೆಯನ್ನು ಕಲ್ಪಿಸಲಾಗಿತ್ತು. ಭಾನುವಾರ ಕೂಡ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದ್ದು, ರಾತ್ರಿ ಸಮಾರೋಪ ಸಮಾರಂಭ ನಡೆಯುವ ಮೂಲಕ ಎರಡು ದಿನಗಳ ಜಲಪಾತೋತ್ಸವಕ್ಕೆ ತೆರೆಬೀಳಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+